Visit Channel

ನಿರ್ದೇಶಕ ರಾಜಮೌಳಿಗೂ ಕೊರೊನಾ ಪಾಸಿಟಿವ್

images

ಖ್ಯಾತ ನಿರ್ದೇಶಕ ಎಸ್‍.ಎಸ್‍.ರಾಜಮೌಳಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜಮೌಳಿ, ನನಗೆ ಹಾಗೂ ತಮ್ಮ ಕುಟುಂಬದ ಸದಸ್ಯರಿಗೆ ಕೆಲವು ದಿನಗಳಿಂದ ತುಸು ಜ್ವರ ಹಾಗೂ ಶೀತ ಕಾಣಿಸಿಕೊಂಡಿತ್ತು. ನಂತರ ಜ್ವರ ವಾಸಿಯಾದರೂ, ಕೊರೊನಾ ಪರೀಕ್ಷೆ ಮಾಡಿಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಮನೆಯ ಸದಸ್ಯರೆಲ್ಲರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದೇವೆ ಎಂದು ತಿಳಿಸಿದ್ದಾರೆ. ಇದೇ ವಿಷಯದ ಬಗ್ಗೆ ಮತ್ತೊಂದು ಟ್ವೀಟ್ ಮಾಡಿರುವ ಅವರು, ನಮ್ಮಲ್ಲಿ ಯಾರಿಗೂ ರೋಗದ ಲಕ್ಷಣಗಳಿಲ್ಲ. ಎಲ್ಲರೂ ಆರಾಮವಾಗಿದ್ದು, ಎಲ್ಲರೂ ಸಹ ಮುನ್ನೆಚ್ಚರಿಕೆ ಮತ್ತು ವೈದ್ಯರ ಸಲಹೆಗಳನ್ನು ಪಾಲಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.