ಬೆಂಗಳೂರು, ಅ. 16: ಶಿರಾ ಹಾಗೂ ಆರ್.ಆರ್. ನಗರ ಉಪ ಚುನಾವಣಾ ಕಾರ್ಯದ ಒತ್ತಡದ ನಡುವೆಯೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶುಕ್ರವಾರ ಚಿತ್ರನಟ ನೆನಪಿರಲಿ ಪ್ರೇಮ್ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರುಗಳ ನಿವಾಸಕ್ಕೆ ಭೇಟಿ ನೀಡಿದ್ದರು.
ಬೆಂಗಳೂರಿನ ನಾಗರಬಾವಿಯಲ್ಲಿರುವ ನಟ ಪ್ರೇಮ್ ಅವರನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಸಮಾಲೋಚನೆ ನಡೆಸಿದರು. ಈ ವೇಳೆ ಪ್ರೇಮ್ ಅವರ ಪತ್ನಿ ಸಹ ಹಾಜರಿದ್ದರು. ಬಳಿಕ ನಾಗರಬಾವಿಯಲ್ಲಿರುವ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರ ನಿವಾಸಕ್ಕೆ ತೆರಳಿದ ಕೆಪಿಸಿಸಿ ಅಧ್ಯಕ್ಷಕರು, ಕೆಲಕಾಲ ಸಮಾಲೋಚನೆ ನಡೆಸಿದರು.