ಚೆನ್ನೈ, ಅ.22: ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ನಿಂದ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ನೆರೆ ಸಂತ್ರಸ್ತರಿಗೆ ಉಚಿತವಾಗಿ ಮನೆಗಳನ್ನು ನಿರ್ಮಿಸಿ ಕೊಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ತಮ್ಮ ಕಚೇರಿಯಲ್ಲಿ ಇಂದು ನೆರೆ ಸಂತ್ರಸ್ತರಿಗೆ ಮನೆಯ ಹಕ್ಕು ಪತ್ರಗಳನ್ನು ಹಸ್ತಾಂತರಿಸಿದ್ದು, ರಜನಿಕಾಂತ್ ಅವರ ಈ ಕೆಲಸಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
1978ರಲ್ಲಿ `ಭೈರವಿ’ ಸಿನಿಮಾದಲ್ಲಿ ಹೀರೋ ಆಗಿ ಕಾಣಿಸಿಕೊಳ್ಳಲು ನೆರವಾಗಿದ್ದ ನಿರ್ಮಾಪಕ ಕಲೈಜ್ಞಾನಂರಿಗೆ ಇತ್ತೀಚೆಗಷ್ಟೇ ಒಂದು ಕೋಟಿ ಮೌಲ್ಯದ ಮನೆಯನ್ನು ಉಡುಗೊರೆಯಾಗಿ ನೀಡಿದ್ದರು ಸೂಪರ್ ಸ್ಟಾರ್ ರಜನಿಕಾಂತ್ .