Visit Channel

ನೌಕಾಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾ ಕಾರ್ಯಕರ್ತರಿಂದ ಹಲ್ಲೆ

shivasene

ನೌಕಾ ಪಡೆಯ ನಿವೃತ್ತ ಅಧಿಕಾರಿ ಮೇಲೆ ಶಿವಸೇನಾ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಶಿವಸೇನೆಯ ಆರು ಕಾರ್ಯಕರ್ತನನ್ನು ಬಂಧಿಸಲಾಗಿದೆ.

ನೌಕಾಪಡೆಯ ನಿವೃತ್ತ ಅಧಿಕಾರಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಾರ್ಟೂನ್ ಚಿತ್ರವನ್ನು ವಾಟ್ಸಾಪ್‌ನಲ್ಲಿ ಫಾರ್ವರ್ಡ್ ಮಾಡಿದ್ದರು ಎನ್ನಲಾಗಿದೆ. ಈ ಕಾರಣದಿಂದ ತಮ್ಮ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ನೌಕಾಪಡೆಯ ನಿವೃತ್ತ ಅಧಿಕಾರಿ ಮದನ್ ಶರ್ಮಾ, ಮುಂಬೈನ ಸಮ್ತಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇನ್ನು ಮದನ್ ಶರ್ಮಾ ಅವರಿಗೆ ವಾಟ್ಸಾಪ್ ಸಂದೇಶದಲ್ಲಿ ಬಂದಿದ್ದ ಕಾರ್ಟೂನ್ ಒಂದನ್ನು ವಾಟ್ಸಾಪ್ ಗ್ರೂಪ್ ಒಂದರಲ್ಲಿ ಹಂಚಿಕೊಂಡಿದ್ದರು, ತಮ್ಮ ನಿವಾಸದಿಂದ ಹೊರಗೆ ಬರುತ್ತಿದ್ದಂತೆಯೇ ಶಿವಸೇನೆ ಕಾರ್ಯಕರ್ತರು ಅವರನ್ನು ಅಟ್ಟಾಡಿಸಿ ಹೊಡೆದಿದ್ದಾರೆ. ಮದನ್ ಶರ್ಮಾ ಅವರ ಕೊರಳಪಟ್ಟಿ ಹಿಡಿದೆಳೆದು ಮುಖದ ಮೇಲೆ ಬಾರಿಸುವ ದೃಶ್ಯಗಳು ಸಿಸಿಟಿವಿ ವಿಡಿಯೋದಲ್ಲಿ ದಾಖಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಸಮ್ತಾ ನಗರ ಪೊಲೀಸರು, ಶಿವಸೇನೆಯ ಕಮಲೇಶ್ ಕದಂ ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದ್ದು, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.