ರಾಜಸ್ಥಾನ ನ.2 : ಕೊರೋನಾ ಸೋಂಕಿನ ಭೀತಿ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಈ ವರ್ಷ ಪಟಾಕಿ ಮಾರಾಟವನ್ನು ನಿಷೇಧಿಸಲಾಗಿದೆ ಎಂಬುದಾಗಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ತಿಳಿಸಿದ್ದಾರೆ.
ಈ ಬಾರಿಯ ದೀಪಾವಳಿಗೆ ಪಟಾಕಿ ಮಾರಾಟ ಮಾಡುವಂತ್ತಿಲ್ಲ ಹಾಗೂ ಖರೀದಿಸುವಂತಿಲ್ಲೆಂದು ರಾಜಸ್ಥಾನದ ಸಿ ಎಂ ಈ ಕುರಿತಂತೆ ಟ್ವಿಟ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು, ಸಾರ್ವಜನಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿರುವಂತಹ ಸಿಡಿಮದ್ದುಗಳ ಮಾರಾಟಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಲಾಗಿದೆ. ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ವೇಳೆ ನಿಯಮ ಮೀರಿ ಪಟಾಕಿ ಯಾರಾದರೂ ಮಾರಾಟ ಮಾಡಿದಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮಾಹಿತಿ
ಬೆಂಗಳೂರಿನಲ್ಲಿ ಬಿಬಿಎಂಪಿ ಯಿಂದ ಮಕ್ಕಳಿಗೆ ಉಚಿತ ಟ್ಯೂಷನ್ ಮತ್ತು ಕೌಶಲ್ಯ ತರಬೇತಿ
ಈ ಕೌಶಲ್ಯ ತರಬೇತಿ ಬಡ ಸರಕಾರಿ ಶಾಲೆ ಮಕ್ಕಳಿಗೆ ಮತ್ತು ಕೊಳಗೇರಿ ಯಲ್ಲಿ ವಾಸ ಮಾಡತ್ತಿರುವ ಮಕ್ಕಳಿಗೆ ಉಪಯೋಗವಾಗಲಿದೆ.