ಪದವಿ ಪೂರ್ವ `ಯಶ’

ಕನ್ನಡದಲ್ಲಿ ಯಶ್ ಯಶಸ್ಸು ಆರಂಭವಾಗಿದ್ದು ಯೋಗರಾಜ್ ಭಟ್ ಗರಡಿಯಿಂದ. ಇದೀಗ ಅದೇ ಗರಡಿಗೆ ಯಶ ಎನ್ನುವ ನಾಯಕಿಯ ಆಗಮನವಾಗಿದೆ. ಈಕೆ ಕೂಡ ಮುಂದೆ ಯಶಸ್ವಿ ನಾಯಕಿಯಾಗುವ ಭರವಸೆಯನ್ನು `ಪದವಿ ಪೂರ್ವ’ದ ಮೂಲಕ ಪೂರ್ವಭಾವಿಯಾಗಿಯೇ ಮೂಡಿಸಿದ್ದಾರೆ.

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ ಚಿತ್ರವೇ “ಪದವಿಪೂರ್ವ”. ಚಿತ್ರಕ್ಕೆ ಈಗಾಗಲೇ ಅಂಜಲಿ ಅನೀಶ್ ಎನ್ನುವ ನಾಯಕಿ ಇದ್ದಾರೆ. ಇವರೊಂದಿಗೆ ಮತ್ತೋರ್ವ ನಾಯಕಿಯಾಗಿ ಮಂಗಳೂರಿನ ಆಳ್ವಾಸ್ ಕಾಲೇಜ್ ವಿದ್ಯಾರ್ಥಿನಿ ಯಶಾ ಶಿವಕುಮಾರ್ ರಂಗ ಪ್ರವೇಶ ಮಾಡಿದ್ದಾರೆ. ಈ ಚೆಲುವೆ 2019 ವರ್ಷದಲ್ಲಿ ‘ಫ್ಯಾಶನ್ ಎಬಿಸಿಡಿ’ ಸಂಸ್ಥೆ ಆಯೋಜಿಸಿದ್ದ “ಮಿಸ್ ಬೆಂಗಳೂರು 2019 ” “ಮಿಸ್ ಕರ್ನಾಟಕ ಇಂಟರ್ನ್ಯಾಷನಲ್ 2019” ಹಾಗೂ ಮುಂಬೈನಲ್ಲಿ ನಡೆದ “ಮಿಸ್ ಗ್ಲೋರಿ ಆಫ್ ಗ್ಯಾಲಕ್ಸಿ 2019” ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲ್ಲುವ ಮೂಲಕ ಅನೇಕ ಫ್ಯಾಶನ್ ಕಿರೀಟಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾಳೆ. ಈಕೆ ಭರತನಾಟ್ಯ ಮತ್ತು ಕಥಕ್ ನೃತ್ಯ ಕಲಾವಿದೆಯಾಗಿದ್ದು, ಫ್ರೀ ಸ್ಟೈಲ್, ಬಾಲಿವುಡ್, ಮಣಿಪುರಿ ಮತ್ತು ಜಾನಪದದಂತಹ ಇತರ ನೃತ್ಯ ಪ್ರಕಾರಗಳನ್ನೂ ಚೆನ್ನಾಗಿ ಅರಿತಿದ್ದಾಳೆ. ಇದಷ್ಟೇ ಅಲ್ಲದೆ ದೇಶದ ಅತ್ಯಂತ ಸುಪ್ರಸಿದ್ಧ ವಸ್ತ್ರ ವಿನ್ಯಾಸಕರು ಮತ್ತು ಛಾಯಾಗ್ರಾಹಕರುಗಳೊಂದಿಗೆ ಕೆಲಸ ಮಾಡಿರುವ ಅನಿಭವವೂ ಇದೆ.

ಮಾಡೆಲಿಂಗ್ ಹಾದಿಯೇ ಈಕೆಯನ್ನು ಸಿನಿಮಾ ಲೋಕಕ್ಕೆ ಕಾಲಿಡುವಂತೆ ಮಾಡಿದೆಯಲ್ಲದೆ, ನಟನೆಯನ್ನೇ ಪೂರ್ಣ ಪ್ರಮಾಣದ ವೃತ್ತಿಯನ್ನಾಗಿ ಸ್ವೀಕರಿಸಲು ಪ್ರೇರೇಪಿಸಿದೆ. ಕನ್ನಡ ಚಿತ್ರರಂಗದಲ್ಲಿ ತನ್ನ ಅದೃಷ್ಟ ಪರೀಕ್ಷೆಗೆ ಸಜ್ಜಾಗಿರುವ ಈ ಕಲಾವಿದೆ, ಕಠಿಣ ಪರಿಶ್ರಮದ ಮೂಲಕ ಚಿತ್ರೋದ್ಯಮದಲ್ಲಿ ಏನನ್ನಾದರೂ ಸಾಧಿಸಿಯೇ ತೀರುತ್ತೇನೆಂಬ ಆಶಾಭಾವ ಹೊಂದಿದ್ದಾರೆ. ಪ್ರತಿಭೆಯ ಜೊತೆಗೆ ಆತ್ಮವಿಶ್ವಾಸವನ್ನೂ ಮೈಗೂಡಿಸಿಕೊಂಡಿರುವ ಈ ಸುಂದರ ಕಲಾವಿದೆ, ಚಿತ್ರರಂಗದಲ್ಲಿ ಮುಂದೊಂದು ದಿನ ಸ್ಟಾರ್ ನಟಿಯಾಗಿ ಗುರುತಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನ ಇಲ್ಲ.

ಇದು ಚಿತ್ರದ ನಾಯಕ ‘ಪೃಥ್ವಿ ಶಾಮನೂರ್’ ಹಾಗು ನಾಯಕಿ ‘ಅಂಜಲಿ ಅನೀಶ್’ ಗೂ ಕೂಡ ಚೊಚ್ಚಲ ಸಿನಿಮಾ ಆಗಿದೆ. ಚಿತ್ರಕ್ಕೆ ‘ಅರ್ಜುನ್ ಜನ್ಯ’ ಸಂಗೀತ ಹಾಗು ‘ಸಂತೋಷ್ ರೈ ಪತಾಜೆ’ ಅವರ ಛಾಯಾಗ್ರಹಣ ಇದೆ. ಹದಿಹರೆಯದ ಮೋಜು, ಮಸ್ತಿ, ಮೋಹ, ಸ್ನೇಹಗಳ ಕುರಿತಾದ ಕಥೆ ಇದಾಗಿದ್ದು ಚಿತ್ರವನ್ನು ಮಲೆನಾಡಿನ ಅತ್ಯಂತ ಸುಂದರ ತಾಣಗಳಲ್ಲಿ ಚಿತ್ರೀಕರಿಸುವ ಯೋಜನೆ ಇದೆ. ಉಳಿದಂತೆ ಬೇರೆ ಪಾತ್ರಗಳನ್ನು ಆಡಿಶನ್ ಮೂಲಕ ಆಯ್ಕೆ ಮಾಡಲಾಗಿದ್ದು, ಮತ್ತಷ್ಪು ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗಕ್ಕೆ ಪರಿಚಯಿಸುವ ಹಾದಿಯಲ್ಲಿ ತಂಡ ಕೆಲಸ ಮಾಡುತ್ತಿದೆ.

Latest News

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.

ರಾಜಕೀಯ

1947ರ ಹಿಂದಿನ ಕಾಂಗ್ರೆಸ್ ಬೇರೆ, ಈಗಿನ ಸೋಗಲಾಡಿ ಸಿದ್ಧಹಸ್ತರು ಇರುವ ಕಾಂಗ್ರೆಸ್ಸೇ ಬೇರೆ : ಹೆಚ್‍ಡಿಕೆ

ಇದುವರೆಗೂ ಕಾಂಗ್ರೆಸ್ ನಡೆಸಿದ ಸ್ವಾತಂತ್ರ್ಯ ವಿರೋಧಿ ಕೃತ್ಯಗಳಿಗೆ ಉತ್ತರ ಕೊಡುವಿರಾ? ಕಾಂಗ್ರೆಸ್ ಕೋಳಿ ಕೂಗಿದರೆ ಭಾರತದಲ್ಲಿ ಬೆಳಕು ಹರಿಯುತ್ತದೆ ಎನ್ನುವ ಕಾಲ ಹೋಯಿತು.

ದೇಶ-ವಿದೇಶ

8ನೇ ಬಾರಿಗೆ ಸಿಎಂ ಆಗಿ ನಿತೀಶ್ ಕುಮಾರ್ ; `ಜನಾದೇಶಕ್ಕೆ ದ್ರೋಹʼ : ಬಿಜೆಪಿ

164 ಶಾಸಕರ ಪಟ್ಟಿಯನ್ನು ಸಲ್ಲಿಸಿ, ಬಿಹಾರದಲ್ಲಿ ಹೊಸ ಸರ್ಕಾರ ರಚಿಸಲು ಏಳು ಪಕ್ಷಗಳ ಬೆಂಬಲವನ್ನು ಪಡೆದುಕೊಂಡಿದ್ದಾರೆ. ಹೀಗಾಗಿ ನಿತೀಶ್ ಕುಮಾರ್ ಇಂದು ಎಂಟನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.