Visit Channel

ಪರಿಷತ್‍ಗೆ ಐವರ ನಾಮನಿರ್ದೇಶನ

mla-570x330

ವಿಧಾನಪರಿಷತ್‌ ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಮಾಜಿ ಸಚಿವ ಎ.ಎಚ್‌.ವಿಶ್ವನಾಥ್‌ ಸೇರಿ ಐವರು ಆಯ್ಕೆಯಾಗಿದ್ದಾರೆ. ಸಿ.ಪಿ.ಯೋಗೇಶ್ವರ್‌, ತಲ್ವಾರ್‌ ಸಾಬಣ್ಣ, ಭಾರತಿ ಶೆಟ್ಟಿ, ಗುರುರಾಜ ಕರ್ಜಗಿ ಹಾಗೂ ಶಾಂತಾರಾಮ್‌ ಸಿದ್ದಿ ಅವರನ್ನೂ ಪರಿಷತ್‌ ಗೆ ನಾಮ ನಿರ್ದೇಶನ ಮಾಡಲಾಗಿದೆ. ಐದೂ ಜನರ ಪಟ್ಟಿಗೆ ರಾಜ್ಯಪಾಲ ವಜೂಭಾಯಿ ವಾಲಾ ಅಂಕಿತ ಹಾಕಿದ್ದಾರೆ.


ಪಕ್ಷಾಂತರ ಮಾಡಿದ್ದರಿಂದಾಗಿ ಅನರ್ಹಗೊಂಡಿದ್ದ ಶಾಸಕರಲ್ಲಿ ಒಬ್ಬರಾಗಿದ್ದ ಎ.ಎಚ್‌.ವಿಶ್ವನಾಥ್‌ ಉಪಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದರು. ಅನಂತರ ವಿಧಾನಸಭೆಯಿಂದ ಆಯ್ಕೆಯಾಗುವ ಪರಿಷತ್‌ ಸ್ಥಾನಕ್ಕೆ ಬೇಡಿಕೆ ಸಲ್ಲಿಸಿದ್ದರು. ಆದರೆ ಬಿಜೆಪಿ ಹೈಕಮಾಂಡ್‌ ವಿಶ್ವನಾಥ್‌ ಗೆ ಆಗ ಮಣೆ ಹಾಕಿರಲಿಲ್ಲ. ಈಗ ಕೊನೆಗೂ ವಿಶ್ವನಾಥ್‌ ಪರಿಷತ್‌ ಗೆ ನಾಮನಿರ್ದೇಶನಗೊಂಡಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.