Visit Channel

ಪಾಕ್ ನಲ್ಲಿ ಆಹಾರ ಸಾಮಾಗ್ರಿಗಳ ಬೆಲೆ ಗಗನಕ್ಕೇರಿಕೆ

DG7-1

ಪಾಕಿಸ್ತಾನದ ಆರ್ಥಿಕ ಸ್ಥಿತಿ ಕಂಗೆಟ್ಟಿದ್ದು, ಇದಕ್ಕೆ ನಿದರ್ಶನದಂತೆ ಈಗ ಟೋಮಾಟೋ ದರ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಜನರು ದಿನನಿತ್ಯದ ಆಹಾರಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಸಾಮಾನ್ಯವಾಗಿ ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬಂದರೆ, ಪಾಕಿಸ್ತಾನದಲ್ಲಿ ಟೊಮಾಟೋ ಖರೀದಿಸುವುವಾಗ ಕಣ್ಣೀರಿಡುತ್ತಿದ್ದಾರೆ. ರೋಟಿ, ನಾನ್ ಬೆಲೆಯೂ ಏರಿಕೆಯಾಗಿದ್ದು, ಈ ನಡುವೆ ಟೊಮಾಟೋ ದರ ಸಹ ಹೆಚ್ಚಿದೆ. ಪ್ರತಿ ಕೆ.ಜಿ ಟೊಮಾಟೊ ಬೆಲೆ 300 ರೂಪಾಯಿ ಆಗಿದ್ದು, ಇದರೊಟ್ಟಿಗೆ ಈರುಳ್ಳಿ, ಸೇರಿದಂತೆ ಹಸಿ ತರಕಾರಿಗಳ ಬೆಲೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಎಲ್ಲಾ ವಸ್ತುಗಳನ್ನು ಪಾಕಿಸ್ತಾನ ಭಾರತದಿಂದ ಆಮದು ಮಾಡಿಕೊಳ್ಳುತ್ತಿದ್ದು. ಭಾರತದೊಂದಿಗೆ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿದ್ದು, ಇದರ ಪರಿಣಾಮವಾಗಿ ಪಾಕ್ ನಲ್ಲಿ ಉತ್ಪನ್ನಗಳ ಬೆಲೆ ಗಗನಕ್ಕೇರಿದೆ.ಈಗಾಗಲೇ ಜಮ್ಮು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಭಾರತ, ಇದರ ವಿರುದ್ದ ಪಾಕಿಸ್ತಾನ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಇಷ್ಟು ಮಾತ್ರವಲ್ಲದೆ ಈ ನಿರ್ಣಯದ ಬಗ್ಗೆ ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಆದರೆ ಈ ಮನವಿ ವಿಶ್ವಸಂಸ್ಥೆ ಪರಿಗಣಿಸದೆ ಜಗತಿಕ ಮಟ್ಟದಲ್ಲಿ ಮುಖಭಂಗ ಎದುರಿಸಿತ್ತು. ಈ ಎಲ್ಲಾ ಅವಮಾನದ ನಡುವೆಯು ಭಾರತದ ರಾಯಭಾರಿ ಅಜಯ್ ಬಿಸಾರಿಯಾ ಅವರನ್ನು ಹೊರಹಾಕಿದೆ. ಈ ಎಲ್ಲಾ ತಪ್ಪಿಗೆ ಪಾಕ್ ತಕ್ಕ ಪಾಠ ಎಂಬಂತೆ ಆಹಾರಕ್ಕಾಗಿ ಇನ್ನೊಬ್ಬರನ್ನು ಅಂಗಲಾಚುತ್ತಿದೆ.

Latest News

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.

JK
ದೇಶ-ವಿದೇಶ

ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರನ್ನು ಹತ್ಯೆಗೈದ ಭಯೋತ್ಪಾದಕರು!

ಕಾಶ್ಮೀರಿ ಪಂಡಿತರೊಬ್ಬರನ್ನು(Kashmiri Pandits) ಗುಂಡಿಕ್ಕಿ ಕೊಂದು ಆತನ ಸಹೋದರನನ್ನು ಗಾಯಗೊಳಿಸಿದ್ದಾರೆ. ಸಂತ್ರಸ್ತ ಸಹೋದರನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.