ಬೆಂಗಳೂರು: ಪದವಿಪೂರ್ವ ಕಾಲೇಜುಗಳಿಗೆ ಈ ಹಿಂದೆ ಇದ್ದ ಒಂದು ವರ್ಷದೊಳಗೆ ನೇಮಕಾತಿ ಅವಧಿಯ ಊರ್ಜಿತವನ್ನು ಮುಂದುವರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಟ್ವಿಟರ್ನಲ್ಲಿ ಮಾಹಿತಿ ನೀಡಿರುವ ಅವರು, ಪದವಿ ಪೂರ್ವ ಕಾಲೇಜು ಬೋಧಕರ ಆಯ್ಕೆ ಬಗ್ಗೆ ಈಗಾಗಲೇ ನೇಮಕಾತಿ ಪ್ರಕ್ರಿಯೆ ಮತ್ತು ಕೌನ್ಸಿಲಿಂಗ್ ನಡೆದು ಸ್ಥಳಗಳನ್ನು ನಿಗದಿಪಡಿಸಲಾಗಿದೆ.
ಆದರೆ ಕೋವಿಡ್-19 ಪರಿಸ್ಥಿತಿ ಹಿನ್ನಲೆಯಲ್ಲಿ ಇನ್ನೂ ಕಾಲೇಜುಗಳು ಆರಂಭವಾಗದೆ ಇರುವುದರಿಂದ ಬೋಧಕರಿಗೆ ವರದಿ ಮಾಡಿಕೊಳ್ಳುವುದಕ್ಕೆ ತೊಂದರೆ ಆಗುತ್ತಿರುವುದು ಗಮನಕ್ಕೆ ಬಂದಿದೆ.
ಈ ನಿಟ್ಟಿನಲ್ಲಿ, ಬೋಧಕರಿಗೆ ಅನುಕೂಲವಾಗುವಂತೆ, ಈ ಹಿಂದೆ ಇದ್ದ ಒಂದು ವರ್ಷದೊಳಗೆ ನೇಮಕಾತಿ ಅವಧಿಯ ಊರ್ಜಿತವನ್ನು, ನೇಮಕಾತಿ ಆಗುವವರೆಗೆ ಮುಂದುವರಿಸಲಾಗುವುದು. ಆದ್ದರಿಂದ ಬೋಧಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.