ಮಡಿಕೇರಿ ಅ.17: ಭಾಗಮಂಡಲ ತ್ರಿವೇಣಿ ಸಂಗಮದ ಬಳಿ ನೂತನವಾಗಿ ನಿರ್ಮಿಸಿರುವ ಮುಡಿ ಶೆಡ್ಡು, ಪಿಂಡ ಪ್ರದಾನ, ಶ್ರದ್ಧಾ ಮತ್ತು ಹೋಮಗಳಂತಹ ಪೂಜಾ ಕೈಂಕರ್ಯಗಳಿಗೆ ನೂತನ ಕಟ್ಟಡವನ್ನು ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶುಕ್ರವಾರ ಉದ್ಘಾಟಿಸಿದರು.
ವಿರಾಜಪೇಟೆ ಶಾಸಕರಾದ ಕೆ.ಜಿ ಬೋಪಯ್ಯ, ಜಿ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕವಿತಾ ಪ್ರಭಾಕರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತಮ್ಮಯ್ಯ ಇತರರು ಉಪಸ್ಥಿತರಿದ್ದರು.