ಹೊಸದಿಲ್ಲಿ, ಅ21: ಪೊಲೀಸ್ ಸಿಬ್ಬಂದಿ ಯಾವುದೇ ಹಿಂಜರಿಕೆಯಿಲ್ಲದೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.
ಪೊಲೀಸ್ ಹುತಾತ್ಮರ ದಿನಾಚರಣೆ ಹಿನ್ನೆಲೆಯಲ್ಲಿ, ಪೊಲೀಸರ ಸಾಹಸ ಹಾಗೂ ತ್ಯಾಗವನ್ನು ಸ್ಮರಿಸಿದ ಪ್ರಧಾನಿ ಮೋದಿ, ನಮ್ಮ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಭಯಾನಕ ಅಪಾರಾಧ ಪ್ರಕರಣಗಳನ್ನು ಬಗೆಹರಿಸುವಲ್ಲಿ ಅಷ್ಟೇ ಅಲ್ಲದೇ ವಿಪತ್ತು ನಿರ್ವಹಣೆಗೆ ಸಹಾಯದಿಂದ ಹಿಡಿದು ಈಗ ಕೊರೊನಾ ವಿರುದ್ದದ ಹೋರಾಟದಲ್ಲೂ ಯಾವುದೇ ಹಿಂಜರಿಕೆಯಿಲ್ಲದೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಧನ್ಯವಾದ ತಿಳಿಸಲು ಈ ದಿನವು ನಮಗೆ ದೊರೆತಿರುವ ಒಂದು ಅವಕಾಶ. ಈ ಸಂದರ್ಭದಲ್ಲಿ ನಾವು ಎಲ್ಲಾ ಪೊಲೀಸ್ ಸಿಬ್ಬಂದಿಗಳಿಗೆ ಗೌರವ ಸಲ್ಲಿಸುತ್ತೇವೆ. ಕರ್ತವ್ಯದ ಸಾಲಿನಲ್ಲಿ ಹುತಾತ್ಮರಾದ ಎಲ್ಲಾ ಪೊಲೀಸ್ ಸಿಬ್ಬಂದಿಗಳ ತ್ಯಾಗ ಮತ್ತು ಸೇವೆ ಎಂದಿಗೂ ನಾವು ಮರೆಯಲಾರೆವು ಎಂದು ಹೇಳಿದ್ದಾರೆ. ಹಾಗೆಯೇ ಪೊಲೀಸರ ಸಮರ್ಪಣೆ ಹಾಗೂ ದೃಢತೆ ನಮಗೆ ಹೆಮ್ಮೆ ಎಂದು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.