ಬೆಳಗಾವಿ, ಅ.19: ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈವರೆಗೆ ಸುಮಾರು 3 ಸಾವಿರ ಕೋಟಿ ರೂ.ಗೂ ಅಧಿಕ ನಷ್ಟವಾಗಿದೆ ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಪ್ರವಾಹಕ್ಕೆ ಇದುವರೆಗೆ ಸುಮಾರು 3 ಸಾವಿರ ಕೋಟಿ ರೂ.ಗಳಿಗೂ ಅಧಿಕ ಆಸ್ತಿ-ಪಾಸ್ತಿ, ಬೆಳೆ ನಷ್ಟವಾಗಿದ್ದು, 10 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. ಸುಮಾರು 500 ಕ್ಕೂ ಹೆಚ್ಚು ಜಾನವಾರುಗಳು ಸಾವನ್ನಪ್ಪಿವೆ ಎಂದು ತಿಳಿಸಿದರು. ಕಾಳಜಿ ಕೇಂದ್ರದಲ್ಲಿ ಸುಮಾರು 8 ಸಾವಿರಕ್ಕೂ ಹೆಚ್ಚು ಜನರನ್ನು ವಸತಿ ನಿಲಯ ಕಲ್ಪಿಸಲಾಗಿದೆ. ಕಾಳಜಿ ಕೇಂದ್ರಗಳಲ್ಲೂ ಕೊರೊನಾಕ್ಕೆ ಸಂಬಂಧಿಸಿದಂತೆ ಮಾಸ್ಕ್, ಸ್ಯಾನೀಟಸರ್ ಮುಂಜಾಗ್ರತಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಕೊರೊನಾ ಮತ್ತು ಪ್ರವಾಹವನ್ನು ಮೆಟ್ಟಿನಿಂತು ಸಂಕಷ್ಟದಿಂದ ಹೊರಬರುವ ಕೆಲಸ ರಾಜ್ಯ ಸರ್ಕಾರ ಮಾಡಲಿದೆ ಎಂದರು.