• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಪ್ರವಾಹ ಪೀಡಿತ ಪ್ರದೇಶಗಳಿಗೆ ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಭೇಟಿ

Kiran K by Kiran K
in ರಾಜ್ಯ
ಪ್ರವಾಹ ಪೀಡಿತ ಪ್ರದೇಶಗಳಿಗೆ ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಭೇಟಿ
0
SHARES
12
VIEWS
Share on FacebookShare on Twitter

ಮಡಿಕೇರಿ ಆ.22(ಕ.ವಾ):-ನೂತನ ಸಚಿವರಾದ ಎಸ್.ಸುರೇಶ್ ಕುಮಾರ್ ಅವರು ಕುಶಾಲನಗರ, ನೆಲ್ಯಹುದಿಕೇರಿ ಬಳಿಯ ಕುಂಬಾರಗುಂಡಿ, ಸಿದ್ದಾಪುರ ಬಳಿಯ ಕರಡಿಗೋಡು ಮತ್ತಿತರ ಪ್ರವಾಹ ಪೀಡಿತ ಪ್ರದೇಶಗಳು, ತೋರ ಭೂ ಕುಸಿತ ಪ್ರದೇಶ, ಮಾಕುಟ್ಟ ರಸ್ತೆ ವೀಕ್ಷಣೆ ಹಾಗೂ ವಿರಾಜಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಭೂಮಿ ಬಿರುಕು ಬಿಟ್ಟಿರುವ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಜೊತೆ ಮಾತನಾಡಿದ ಸಚಿವರು ಪ್ರವಾಹದಿಂದ ತುಂಬಾ ತೊಂದರೆಗೆ ಒಳಗಾಗಿದ್ದು, ಸ್ಥಳಾಂತರವಾಗಲು ಮನಸ್ಸು ಮಾಡಬೇಕು. ಸರ್ಕಾರದಿಂದ ಮನೆ ನಿರ್ಮಿಸಿಕೊಡಲಾಗುವುದು ಎಂದು ಸಚಿವರು ತಿಳಿಸಿದರು.
ಇದಕ್ಕೆ ಅಲ್ಲಿನ ಸಂತ್ರಸ್ತರು ಕೂಲಿ ಮಾಡಿ ಬದುಕುತ್ತಿದ್ದೇವು, ಪ್ರವಾಹದಿಂದಾಗಿ ಮನೆ ಕಳೆದುಕೊಂಡಿದ್ದು, ದಿಕ್ಕು ತೋಚದಂತಾಗಿದೆ ಎಂದು ಅಳಲು ತೋಡಿಕೊಂಡರು.
ಮನೆ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಲಾಗುವುದು. ಆ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಕೈಗೊಳ್ಳಲಿದೆ ಎಂದರು.
ಕುಂಬಾರಗುಂಡಿ ಮತ್ತು ಕರಡಿಗೋಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ಮೊದಲ ವಾರದಲ್ಲಿ ಸುರಿದ ಧಾರಾಕಾರ ಮಳೆಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಈ ಸಂಬಂಧ ಸಚಿವ ಸಂಪುಟಕ್ಕೆ ವರದಿ ಸಲ್ಲಿಸಲಾಗುವುದು ಎಂದರು.
ರಾಜ್ಯದ ಹನ್ನೆರಡು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ ಸಾಕಷ್ಟು ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಪ್ರವಾಹದಿಂದ ಸಾಕಷ್ಟು ಮನೆಗಳು ಹಾನಿಯಾಗಿದೆ. ಸಂತ್ರಸ್ತರಿಗೆ ಶಾಶ್ವತ ಸೂರು ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಪುನರ್ ವಸತಿ ಕಲ್ಪಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಸುಮಾರು 190 ಕ್ಕೂ ಹೆಚ್ಚು ಮನೆಗಳು ಹಾನಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಕುಟುಂಬಗಳನ್ನು ಸ್ಥಳಾಂತರಿಸಿ ಮನೆ ನಿರ್ಮಿಸಿಕೊಡಬೇಕಿದೆ ಎಂದರು.
ಈಗಾಗಲೇ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ 10 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು. ಕೇಂದ್ರದ ಗೃಹ ಸಚಿವರು ಮತ್ತು ಹಣಕಾಸು ಸಚಿವರು ರಾಜ್ಯ ಪ್ರವಾಸ ಕೈಗೊಂಡು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಿದ್ದಾರೆ. ಸದ್ಯದಲ್ಲೇ ಹಣ ಬಿಡುಗಡೆಯಾಗಲಿದೆ ಎಂದು ಸುರೇಶ್ ಕುಮಾರ್ ಅವರು ತಿಳಿಸಿದರು.

Related News

ಹೋಟೆಲ್‌ ಕಿಚನ್‌ಗಳಿಗೆ ಹೊಸ ರೂಲ್ಸ್‌; CCTV ಕ್ಯಾಮೆರಾ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ
ಪ್ರಮುಖ ಸುದ್ದಿ

ಹೋಟೆಲ್‌ ಕಿಚನ್‌ಗಳಿಗೆ ಹೊಸ ರೂಲ್ಸ್‌; CCTV ಕ್ಯಾಮೆರಾ ಕಡ್ಡಾಯ, ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ

August 11, 2026
ಬಿಡದಿ ಪಾದಯಾತ್ರೆ ಅರ್ಧಕ್ಕೆ ಅಂತ್ಯ: ರೈತರಿಗಾಗಿ ಹೋರಾಟ ಮುಂದುವರಿಸುವುದಾಗಿ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಘೋಷಣೆ
ಪ್ರಮುಖ ಸುದ್ದಿ

ಬಿಡದಿ ಪಾದಯಾತ್ರೆ ಅರ್ಧಕ್ಕೆ ಅಂತ್ಯ: ರೈತರಿಗಾಗಿ ಹೋರಾಟ ಮುಂದುವರಿಸುವುದಾಗಿ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಘೋಷಣೆ

August 11, 2026
ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಡಿಕೆಶಿ ದೆಹಲಿಗೆ ದೌಡು; ಹೈಕಮಾಂಡ್ ಜೊತೆ ಮಹತ್ವದ ಚರ್ಚೆ
ಪ್ರಮುಖ ಸುದ್ದಿ

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಡಿಕೆಶಿ ದೆಹಲಿಗೆ ದೌಡು; ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

August 10, 2026
ಯುಬಿ ಸಿಟಿಯ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ: 45 ಕೆಜಿ ಕೊಳೆತ ಮಾಂಸ, ಬಳಸಿದ ಎಣ್ಣೆ ಪತ್ತೆ
ಪ್ರಮುಖ ಸುದ್ದಿ

ಯುಬಿ ಸಿಟಿಯ ಪಂಚತಾರಾ ಹೋಟೆಲ್‌ಗಳ ಮೇಲೆ ಆಹಾರ ಇಲಾಖೆ ದಾಳಿ: 45 ಕೆಜಿ ಕೊಳೆತ ಮಾಂಸ, ಬಳಸಿದ ಎಣ್ಣೆ ಪತ್ತೆ

August 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.