ಬೆಂಗಳೂರು, ಅ. 29: ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತ ಕುಟುಂಬಗಳಿಗೆ ತಕ್ಷಣ ಪರಿಹಾರ ಒದಗಿಸಿ ಹಾನಿಯಾಗಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ಮರು ನಿರ್ಮಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಿದ್ದರಾಮಯ್ಯನವರು ಆಪ್ರದೇಶದ ಪರಿಸ್ಥಿತಿ ಆಧರಿಸಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಈ ವರ್ಷದ ಪ್ರವಾಹದಿಂದ ಶೇಂಗಾ, ಈರುಳ್ಳಿ, ಅಡಿಕೆ, ಭತ್ತ, ಕಾಫಿ, ಮೆಣಸು, ಜೋಳ, ಹಲವು ದ್ವಿದಳ ಧಾನ್ಯಗಳು, ಹತ್ತಿ, ಮೆಣಸು, ಮೆಣಸಿನಕಾಯಿ, ರಾಗಿ, ಸಜ್ಜೆ ಮುಂತಾದ ಬೆಳೆಗಳೆಲ್ಲ ಕೊಳೆತು ಹೋಗಿವೆ, ಕೊಚ್ಚಿ ಹೋಗಿವೆ ಇಲ್ಲ ಉದುರಿ ಹೋಗಿದ್ದು, ರೈತರು ಅನೇಕ ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಅವರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಬೇಕೆಂದು ಹೇಳಿದ್ದಾರೆ.
ಇನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ ಬಿಟ್ಟರೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿಲ್ಲ. ಕಂದಾಯ ಸಚಿವರು ಕೂಡ ಕಾಟಾಚಾರಕ್ಕೆ ಹೋಗಿ ಭೇಟಿ ನೀಡಿದ್ದಾರೆ. ಪ್ರಾಕೃತಿಕ ವಿಕೋಪಗಳನ್ನು ಎದುರಿಸಲಾಗದೆ ಜನ ಅಸಹಾಯಕರಾಗಿ ಕಂಗೆಟ್ಟು ಕೂತಿದ್ದಾರೆ. ಇಂಥ ಹೊತ್ತಿನಲ್ಲಿ ಸರ್ಕಾರ ಜನರ ಜೊತೆ ನಿಲ್ಲಬೇಕಿತ್ತು. ಸರ್ಕಾರಕ್ಕೆ ಚುನಾವಣೆಗಳು ಆದ್ಯತೆಯಾಗಿವೆಯೇ ಹೊರತು ಜನರ ಸಂಕಷ್ಟಗಳಲ್ಲ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದು,