Visit Channel

ಪ್ರವಾಹ ಸಂತ್ರಸ್ತರಿಗೆ ಪರಿಹಾರ ಘೋಷಣೆ

bsy-15960163721596425160

ಬೆಂಗಳೂರು, ಅ. 24: ಮೂರು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಅನೇಕ ಕಡೆಗಳಲ್ಲಿ ಮಳೆ ನೀರು ಮನೆಗಳಿಗೆ ಅಪಾರ್ಟ್‌ಮೆಂಟ್‌ಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ ಹಾಗೆಯೇ ಸಂಚಾರಕ್ಕೂ ಅಡ್ಡಿಯುಂಟಾಗಿದೆ. ಈ ಕಾರಣದಿಂದ ಇಂದು ಮಧ್ಯಾಹ್ನ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಬಿಬಿಎಂಪಿ ಅಧಿಕಾರಿಗಳ ಜತೆಗೆ ತುರ್ತು ಸಭೆಯನ್ನು ನಡೆಸಿದ್ದಾರೆ.  

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಬಗ್ಗೆ, ಸಂತ್ರಸ್ತರಿಗೆ ನೆರವು ಒದಗಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದ್ದು, ಸೂಕ್ತ ಪರಿಹಾರ ಘೋಷಣೆ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಗಿದೆ. ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡವರಿಗೆ, ಮನೆ ಕಳೆದುಕೊಂಡವರಿಗೆ ಪರಿಹಾರ ಹಾಗೂ ಆಹಾರ ಪದಾರ್ಥಗಳ ವಿತರಣೆ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಸಭೆಯ ಬಳಿಕ ಮಾಧ್ಯಮಮಿತ್ರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ. ಎಸ್​ ಯಡಿಯೂರಪ್ಪ ಮಳೆಯಿಂದ ಹಾನಿಗೊಳಗಾದ ಪ್ರತೀ ಕುಟುಂಬಕ್ಕೆ ತಲಾ 25 ಸಾವಿರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಸಭೆಯಲ್ಲಿ  ಕಂದಾಯ ಸಚಿವ ಆರ್ ಅಶೋಕ್, ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಭಾಗಿಯಾಗಿದ್ದರು. ಮಳೆಯಿಂದ ಹಾನಿಗೊಳಗಾದವರಿಗೆ ಸ್ಥಳದಲ್ಲೇ 25 ಸಾವಿರ ರೂ. ಚೆಕ್ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ‌ನಿನ್ನೆ ಸುರಿದ ಭಾರಿ ಮಳೆಯಾದ ಹಿನ್ನಲೆ, ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಬಿಬಿಎಂಪಿ ಆಯುಕ್ತರಾದ ಮಂಜುನಾಥ ಪ್ರಸಾದ್ ಅವರಿಗೆ ಕರೆ ಮಾಡಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ಮಾಡಿ ಪರಿಸ್ಥಿತಿ ಅವಲೋಕಿಸುವಂತೆ ಸೂಚನೆ ನೀಡಿದ್ದಾರೆ. ಹಾಗೆಯೇ ಸಿಎಂ ಬಿಎಸ್​ವೈ ಬಿಬಿಎಂಪಿ ಆಯುಕ್ತರಿಗೆ ಇಂದು ಮತ್ತು ನಾಳೆ ಸಹ ಬಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್​ವೈ ಭೇಟಿ ನೀಡಲು ಮುಂದಾಗಿದ್ದು, ಸದ್ಯದ ಪರಿಸ್ಥಿತಿ ಅವಲೋಕಿಸಲು ಸಿಟಿ ರೌಂಡ್ಸ್‌ ನಡೆಸಲು ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಆಗಿರುವ ಮಳೆ ಹಾನಿ ಬಗ್ಗೆ ಸಿಎಂ ಬಿಎಸ್​​ವೈ ಸಚಿವರಿಂದ ಮಾಹಿತಿ ಪಡೆದಿದ್ದಾರೆ.

ಎಲ್ಲೆಲ್ಲಿ ಮಳೆ ಸುರಿದಿದೆ, ಅಲ್ಲಿ ಮಳೆಯಿಂದ ಯಾವ ರೀತಿ ಅವಾಂತರ ಸೃಷ್ಟಿ ಯಾಗಿದೆ, ಮಳೆಯಿಂದ ಹಾನಿಯಾಗಿರುವ ಪ್ರಮಾಣ, ನಿರಾಶ್ರಿತರ ಪರಿಸ್ಥಿತಿ, ನಿರಾಶ್ರಿತರಿಗೆ ಒದಗಿಸುವ ಸೌಲಭ್ಯ ಹಾಗೂ ಮುಂದೆ ಏನು ಕ್ರಮ ಮಾಡಬೇಕು ಎಂಬುದರ ಬಗ್ಗೆ ಸಿಎಂ ಅವಲೋಕನ ನಡೆಸಿ, ಅಧಿಕಾರಿಗಳು ಮತ್ತು ಸಚಿವರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದು ಬಂದಿದೆ.

Latest News

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

atm
ಮಾಹಿತಿ

ATM ಬಳಕೆದಾರರು ಓದಲೇಬೇಕಾದ ಸುದ್ದಿ ; RBI ನಿಯಮಗಳ ಬಗ್ಗೆ ಸರಳವಾಗಿ ತಿಳಿಯಿರಿ

ಇನ್ನು ನಿಮ್ಮ ಬ್ಯಾಂಕ್ ಹೊರತುಪಡಿಸಿ, ಬೇರೆ ಬ್ಯಾಂಕ್ ನ ಎಟಿಎಂಗಳಲ್ಲಿ ಮೆಟ್ರೋ ಸಿಟಿಗಳಲ್ಲಿ ಮೂರು ಬಾರಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಐದು ಬಾರಿ ಉಚಿತ ಟ್ರಾನ್ಸಾಕ್ಷನ್ ಮಾಡಬಹುದು.

BJP
ರಾಜಕೀಯ

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? : ಬಿಜೆಪಿ

ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ(Congress Party) ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ ಎಂದಿದೆ.

Fruit
ಮಾಹಿತಿ

ಬಿಪಿ, ಮದುಮೇಹ ಸೇರಿದಂತೆ ಅನೇಕ ಖಾಯಿಲೆಗಳಿಗೆ ರಾಮಬಾಣ ನೇರಳೆ ಹಣ್ಣು ; ಓದಿ ಈ ಉಪಯುಕ್ತ ಮಾಹಿತಿ

ಮಧುಮೇಹ, ಹೃದಯದ ಕಾಯಿಲೆ, ಸಂಧಿವಾತ, ಹೊಟ್ಟೆಯ ಖಾಯಿಲೆಗಳ ನಿಯಂತ್ರಣ ಮತ್ತು ನಿವಾರಣೆಗೂ ಇದು ರಾಮಬಾಣ ಎನ್ನುತ್ತದೆ ಆಯುರ್ವೇದ(Ayurveda).