• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಪ್ರವಾಹ ಸಂತ್ರಸ್ತರಿಗೆ ಸ್ಪಂದಿಸಿ: ಬಿಎಸ್‌ವೈ

Sharadhi by Sharadhi
in Vijaya Time
ಪ್ರವಾಹ ಸಂತ್ರಸ್ತರಿಗೆ ಸ್ಪಂದಿಸಿ: ಬಿಎಸ್‌ವೈ
0
SHARES
0
VIEWS
Share on FacebookShare on Twitter

ಬೆಂಗಳೂರು ಅ. 16: ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಕಾನ್ಪರೆನ್ಸ್ ನಡೆಸಿ ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಮಾತನಾಡಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ 85.49 ಕೋಟಿ ರೂಪಾಯಿಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ ಸಿಎಂ ಈ ಸಲ ವಾಡಿಕೆ ಮಳೆಗಿಂತ ಹೆಚ್ಚು ಮಳೆಯಾಗಿದ್ದು, ನನಗೆ ವಾಸ್ತವ ಸ್ಥಿತಿಯ ಚಿತ್ರಣ ನೀಡಿ ಎಂದು ಡಿ.ಸಿ ಗಳಿಗೆ ಸಿಎಂ ಸೂಚಿಸಿದರು. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ಅಕ್ಟೋಬರ್ 10 ರಿಂದ 15 ರವರೆಗೆ ಕಲಬುರಗಿ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ಬಾಗಲಕೋಟೆ, ದಾವಣಗೆರೆ, ಕೊಪ್ಪಳ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಿಂದ ಭೀಮಾ ಮತು ಅದರ ಉಪನದಿಗಳಲ್ಲಿ ದಾಖಲೆ ಪ್ರಮಾಣದ ಒಳಹರಿವು ಕಂಡುಬಂದಿದೆ.

ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ಕ್ರಮ ವಹಿಸಿ ಎಂದು ಸಿಎಂ, ಸೂಚಿಸಿದ್ದಾರೆ. ಸಂತ್ರಸ್ತರಿಗೆ ಉತ್ತಮ ಆಹಾರ ಪೂರೈಕೆಯಾಗಬೇಕು. ಕೋವಿಡ್ ಪರಿಸ್ಥಿತಿಯಲ್ಲಿ ಕಾಳಜಿ ಕೇಂದ್ರಗಳಲ್ಲಿ ಎಸ್.ಒ.ಪಿ ಪಾಲನೆ ಮಾಡಿ ಎಂದರು. ಯಾವ ದೂರುಗಳು ಈ ಬಗ್ಗೆ ಬರಬಾರದು. ಜಾನುವಾರುಗಳಿಗೂ ಈ ಸಂದರ್ಭದಲ್ಲಿ ರಕ್ಷಣೆ ನೀಡಿ ಮೇವು ಪೂರೈಕೆಯಾಗಬೇಕು ಎಂದು ಸಿಎಂ ತಿಳಿಸಿದರು.

ಕೋವಿಡ್ 19 ಹಿನ್ನೆಲೆಯಲ್ಲಿ ಕಾಳಜಿ ಕೇಂದ್ರಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಗಳ ಪೂರೈಕೆ ಸೇರಿದಂತೆ ವೈದ್ಯರು ಭೇಟಿ ನೀಡಿ ತಪಾಸಣೆ ಮಾಡುವಂತೆ ವ್ಯವಸ್ಥೆ ಕೈಗೊಳ್ಳಲು ಹಾಗೂ ಕೋವಿಡ್ ಲಕ್ಷಣಗಳಿರುವವರು ಕಂಡುಬಂದಲ್ಲಿ ಆಸ್ಪತ್ರೆಗಳಿಗೆ ತಕ್ಷಣ ಸ್ಥಳಾಂತರಿಸಲು ಸಿಎಂ ಸೂಚಿಸಿದರು.

ನೆರೆ ಸಂತ್ರಸ್ತ ಕಲಬುರಗಿಗೆ ಮೂರು ತಂಡಗಳು, ಯಾದಗಿರಿಗೆ ಎರಡು ಹಾಗೂ ರಾಯಚೂರಿಗೆ ಒಂದು ತಂಡವನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಎಸ್.ಡಿ.ಆರ್.ಎಫ್ ತಂಡಗಳನ್ನು ರಕ್ಷಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳಿಂದ 14 ದೋಣಿಗಳನ್ನು ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ನೆರೆ ಸಂತ್ರಸ್ತರ ರಕ್ಷಣೆಗಾಗಿ ರಕ್ಷಣಾ ಹೆಲಿಕಾಪ್ಟರ್ ‍ಗಳನ್ನು ಕಳುಹಿಸಲಾಗಿದೆ ಎಂದ ಮುಖ್ಯಮಂತ್ರಿಗಳು ಸಂಘ ಸಂಸ್ಥೆಗಳನ್ನು, ಸಾರ್ವಜನಿಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ನಿರ್ವಹಿಸಿ. ಜನರ ನೋವಿಗೆ ತಕ್ಷಣ ಸ್ಪಂದಿಸಿ ಎಂದು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವಾಹದಿಂದ ಬೆಳೆ ಹಾನಿಯಾದ 51,810 ಸಂತ್ರಸ್ತ ರೈತರ ಬ್ಯಾಂಕ್ ಖಾತೆಗೆ 36.57 ಕೋಟಿ ರೂಪಾಯಿಗಳ ಇನ್‍ಪುಟ್ ಸಬ್ಸಿಡಿಯನ್ನು ನೇರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಜಮೆ ಮಾಡಿದ್ದಾರೆಂದು ತಿಳಿದು ಬಂದಿದೆ.

Related News

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023
ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!
Vijaya Time

ಮಹಿಳೆ ಮೃತದೇಹದ ಮೇಲೆ ನಡೆಯುವ ಅತ್ಯಾಚಾರ ತಡೆಗೆ ಕರ್ನಾಟಕ ಹೈಕೋರ್ಟ್ ಶಿಫಾರಸು : ಶವಗಳನ್ನೂ ಬಿಡುತ್ತಿಲ್ಲ ಕಾಮುಕರು!

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.