ಪ್ರಾಥಮಿಕ ಶಾಲಾ ಅಥಿತಿ ಶಿಕ್ಷಕರ ನೇಮಕಾತಿಗೆ ಆದೇಶ

Share on facebook
Share on google
Share on twitter
Share on linkedin
Share on print

ಬೆಂಗಳೂರು, ನ. 21: ಈಗಾಗಲೇ ಹಲವಾರು ಶಾಲೆಗಳಿಗೆ ಶಿಕ್ಷಕರ ಅವಶ್ಯಕತೆಯಿದ್ದು ಅಥಿತಿ ಉಪನ್ಯಾಸಕರ ನೇಮಕಾತಿ . ಆದರೆ ಇದೀಗ 2020- 2021ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅವಶ್ಯಕವಿರುವ ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ತಾಲೂಕುವಾರು, ಜಿಲ್ಲಾವಾರು ವಿವರಗಳ್ನು ಸಲ್ಲಿಸಲು ರಾಜ್ಯದ ಎಲ್ಲಾ ಜಿಲ್ಲೆಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಆದೇಶಿಸಿಲಾಗಿದೆ. ಹೀಗಾಗಿ ಸದ್ಯದಲ್ಲಿಯೇ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಆದೇಶ ಹೊರ ಬೀಳಲಿದೆ. ಈ ಮೂಲಕ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ಗುಡ್ ನ್ಯೂಸ್ ಸಿಗಲಿದೆ.

 ಅಥಿತಿ ಉಪನ್ಯಾಸಕರ ಹುದ್ದೆಗಳ ಸಂಖ್ಯೆಯ ಮಿತಿಯೊಳಗೆ ಸರ್ಕಾರದ ಈ ಮಾಹಿತಿಯಂತೆ ಜಿಲ್ಲಾವಾರು ಖಾಲಿ ಹುದ್ದೆಗಳನ್ನು ಅವಶ್ಯಕತೆ ಇರುವ ಕಡೆ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ತಾಲ್ಲೂಕುವಾರು ಹುದ್ದೆಗಳ ವಿವರಗಳನ್ನು ಮೇಲ್ ಮೂಲಕ ಕಳುಹಿಸಿಕೊಡಲು ಸೂಚಿಸಿದ್ದಾರೆ. ಈ ಮಾಹಿತಿಯನ್ನು ಪಡೆದುಕೊಂಡು, ಮಾಹಿತಿಯನ್ನು ಆಧರಿಸಿ, ಶೀಘ್ರದಲ್ಲೇ ಅತಿಥಿ ಶಿಕ್ಷಕರ ನೇಮಕಕ್ಕೂ ಆದೇಶ ಹೊರಡಿಸಲಿದೆ.

Submit Your Article