Visit Channel

ಬರಾಕ್ ಒಬಾಮ ಹೇಳಿಕೆಗೆ ಸಂಜಯ್ ರಾವತ್‌ ವಿರೋಧ

WhatsApp Image 2020-11-14 at 4.04.21 PM

ಮುಂಬೈ, ನ. 14: ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮ ತಮ್ಮ ಆತ್ಮಚರಿತ್ರೆ ಪುಸ್ತಕದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಉಲ್ಲೇಖಿಸಿರುವ ಹೇಳಿಕೆಗೆ ಶಿವಸೇನಾ ವಕ್ತಾರ ಸಂಜಯ್ ರಾವತ್‌ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಭಾರತ ರಾಜಕೀಯ ನಾಯಕರ ಬಗ್ಗೆ ಬೇರೆ ದೇಶದ ರಾಜಕಾರಣಿಯೊಬ್ಬರು ಅವರ ಪುಸ್ತಕದಲ್ಲಿ ಇಂತಹ ಹೇಳಿಕೆಗಳನ್ನು ನೀಡುವುದು ತಪ್ಪು, ಒಬಾಮಾ ಅವರಿಗೆ ನಮ್ಮ ದೇಶದ ಬಗ್ಗೆ ಎಷ್ಟು ತಿಳಿದಿದೆ ಎಂದು ಪ್ರಶ್ನಿಸಿದ್ದಾರೆ”.

ಇನ್ನು ಬರಾಕ್ ಒಬಾಮ ಅವರು ತಮ್ಮ ಆತ್ಮಚರಿತ್ರೆ ‘ಎ ಪ್ರಾಮಿಸ್ಡ್‌ ಲ್ಯಾಂಡ್‌’ ಕೃತಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ರಾಹುಲ್ ಗಾಂಧಿ ಅವರ ಕುರಿತು ಉಲ್ಲೇಖಿಸಿದ್ದು, “ರಾಹುಲ್ ಗಾಂಧಿ ಅವರು ಪುಕ್ಕಲು ಮತ್ತು ಅಸ್ಥಿರ ಗುಣಗಳನ್ನು ಹೊಂದಿದ್ದಾರೆ. ಅವರು ಅಭ್ಯಾಸ ಮಾಡುವ ವಿದ್ಯಾರ್ಥಿಯಂತೆ ಇದ್ದಾರೆ. ಹಾಗೆಯೇ ಶಿಕ್ಷಕರನ್ನು ಮೆಚ್ಚಿಸಲು ಉತ್ಸುಕರಾಗಿರುವ ವಿದ್ಯಾರ್ಥಿಯಂತೆ ಇದ್ದಾರೆ. ಆದರೆ ಆಳಕ್ಕೆ ಇಳಿದರೆ ಅವರಿಗೆ ವಿಷಯವನ್ನು ಕರಗತ ಮಾಡಿಕೊಳ್ಳುವ ಉತ್ಸಾಹ ಅಥವಾ ಒಲವು ಇಲ್ಲ” ಎಂದು ಬರೆದಿದ್ದರು.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.