ಬಾಬ್ರಿ ಮಸೀದಿ ದ್ವಂಸ ಪ್ರಕರಣದ ತೀರ್ಪಿನಿಂದ ಮಾಜಿ ಪ್ರಧಾನಿ ಎಲ್ ಕೆ ಅಡ್ವಾಣಿ ಸೇರಿ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ಬಗ್ಗೆ ಬಿಜೆಪಿ ನಾಯಕರು ನಿರಾಳವಾಗಿದ್ದಾರೆ.
ಆದರೆ ನ್ಯಾಯಾಲಯದ ಈ ತೀರ್ಪಿನಿಂದ ಅಸಮಾಧಾನಗೊಂಡ ಮುಸ್ಲಿಮ್ ಸಂಘಟನೆಗಳು ಸೇರಿ ಕೆಲ ಸಂಸ್ಥೆಗಳು ಈ ತೀರ್ಪಿನ ವಿರುದ್ಧ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿವೆ.
ಸಿಬಿಐ ವಿಶೇಷ ನ್ಯಾಯಾಲಯ ನೀಡಿದ ತೀರ್ಪಿನ ಬಗ್ಗೆ ಪ್ರತಿಕ್ರಯಿಸಿದ ಮುಸ್ಲಿಮ್ ಪರ ವಕೀಲರು , ನಾವು ತೀರ್ಪಿನ ಪೂರ್ಣ ಸಾರಾಂಶವನ್ನು ಕೂಲಂಕುಷವಾಗಿ ಓದಿ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.