ಬೆಂಗಳೂರು: ಕೋವಿಡ್-19 ಪರಿಸ್ಥಿತಿ ನಿರ್ವಹಣೆಯಲ್ಲಿ ವೈಫಲ್ಯ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಕಮಿಷನರ್ ಅನಿಲ್ ಕುಮಾರ್ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಇವರ ಜಾಗಕ್ಕೆ ಎನ್. ಮಂಜುನಾಥ್ ಪ್ರಸಾದ್ ಅವರನ್ನು ಬಿಬಿಎಂಪಿಯ ನೂತನ ಕಮಿಷನರ್ ಆಗಿ ನೇಮಿಸಲಾಗಿದೆ. ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಅನಿಲ್ ಕುಮಾರ್ ಅವರು ವೈಫಲ್ಯರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಹೈಕೋರ್ಟ್‌ನಿಂದಲೂ ಬಿಬಿಎಂಪಿ ಕಾರ್ಯ ವೈಖರಿಗೆ ಚಾಟಿ ಬೀಸಿತ್ತು. ಈ ಕಾರಣಕ್ಕೆ ಅನಿಲ್ ಕುಮಾರ್ ಅವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಬೇಕು ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೆ, ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಕೆಲಸ ಮಾಡಿದ್ದ ಕುಮಾರ ನಾಯಕ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಿಸಲು ಚಿಂತನೆ ನಡೆದಿದೆ ಎನ್ನಲಾಗಿತ್ತು. ಆದರೆ, ಈ ಸ್ಥಾನಕ್ಕೆ ಈಗ ಎನ್. ಮಂಜುನಾಥ್ ಪ್ರಸಾದ್ ಅವರನ್ನು ನೂತನ ಕಮಿಷನರ್ ಆಗಿ ನೇಮಕ ಮಾಡಲಾಗಿದೆ. ಅನಿಲ್ ಕುಮಾರ್ ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಲಾಗಿದೆ.