Visit Channel

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ನಟ-ನಟಿಯರು, ಸಂಗೀತ ನಿರ್ದೇಶಕರು ಇವರ ಗ್ರಾಹಕರು

arrestಬೆಂಗಳೂರಿನ ವಿವಿಧೆಡೆಗಳಲ್ಲಿ ದಾಳಿ ನಡೆಸಿದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್‍ಸಿಬಿ) ಅಧಿಕಾರಿಗಳು ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಬಂಧಿಸಿದ್ದು, ಕೋಟ್ಯಾಂತರ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಎಂ. ಅನೂಪ್, ಆರ್.ರವೀಂದ್ರನ್ ಮತ್ತು ಅನಿಖಾ ಎಂದು ಗುರುತಿಸಲಾಗಿದೆ. ಬಂಧಿತರಿಂದ 511 ಎಂಡಿಎಂಎ ಮಾತ್ರೆಗಳು ಹಾಗೂ 180 ಎಸ್‍ಎಲ್‍ಡಿ ಮಾತ್ರೆಗಳನ್ನು ವಶಕ್ಕೆ ಪಡೆದಿದ್ದು, ಇವುಗಳ ಒಟ್ಟು ಮೌಲ್ಯ 2 ಕೋಟಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ.

ಬೆಂಗಳೂರಿನ ಕಲ್ಯಾಣ್ ನಗರದ ಹೋಟೆಲ್‍ವೊಂದರ ಮೇಲೆ ದಾಳಿ ನಡೆಸಿದ ಮಾದಕ ದ್ರವ್ಯ ನಿಯಂತ್ರಣ ಘಟಕ ಅಧಿಕಾರಿಗಳು, 2.20 ಲಕ್ಷ ರೂ, ಮೌಲ್ಯದ 145 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದಲ್ಲದೇ ನಗರದಲ್ಲಿ ನಡೆಸಲಾದ ಮತ್ತೊಂದು ದಾಳಿಯಲ್ಲಿ 96 ಎಮಡಿಎಂಎ ಮಾತ್ರೆಗಳನ್ನು ಮತ್ತು 180 ಎಲ್ಎಸ್ಡಿ ಬ್ಲಾಟ್ಸ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಪ್ರಕರಣದ ಪ್ರಮುಖ ಕಿಂಗ್ ಪಿನ್ ಆಗಿದ್ದ ಮಹಿಳೆಯ ಮನೆ ಮೇಲೆ ನಡೆಸಲಾದ ದಾಳಿಯಲ್ಲಿ 270 ಎಂಡಿಎಂಎ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವನಹಳ್ಳಿಯಲ್ಲಿ ಗ್ರಾಹಕರಿಗೆ ಡಗ್ಸ್ ಸಪ್ಲೈ ಮಾಡಲು ಈ ಮೂವರ ಗ್ಯಾಂಗ್ ಸಜ್ಜಾಗಿತ್ತು. ಈ ವೇಳೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಇವರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಪ್ರಕಾರ, ಈ ದಂಧೆಯ ಕಿಂಗ್​ಪಿನ್ ಕೈಸರ್ ಎನ್ನಲಾಗಿದೆ. ಈತ ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಶಾಂತಿನಗರ ವಾರ್ಡ್​ನಿಂದ ಸ್ಪರ್ಧಿಸಿ ಕೇವಲ 150 ಮತಗಳಿಂದ ಪರಾಭವಗೊಂಡಿದ್ದ. ಈತನ ಡ್ರಗ್ಸ್ ಜಾಲ ವಿಶಾಖಪಟ್ಟಣದಿಂದ ಮೈಸೂರಿನವರೆಗೆ ಚಾಚಿದೆ ಎಂಬ ಬಗ್ಗೆ ತನಿಖೆ ಸಂದರ್ಭದಲ್ಲಿ ತಿಳಿದು ಬಂದಿದೆ. ಬಂಧಿತ ಆರೋಪಿಗಳು ಪ್ರಮುಖ ಸಂಗೀತಗಾರರು, ನಟರು, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಮಾಜದ ಶ್ರೀಮಂತ ವರ್ಗದವರಿಗೆ ಮಾದಕ ಔಷಧಿಗಳನ್ನು ಸರಬರಾಜು,  ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.