Visit Channel

ಬೆಂಗಳೂರು ಜತೆ ಈ ಜಿಲ್ಲೆಗಳೂ ಲಾಕ್‌ಡೌನ್‌?

corona-virus-getty

ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಪ್ರಕರಣಕ್ಕೆ ತಡೆಯೊಡ್ಡಲು ಮುಂದಾಗಿರುವ ರಾಜ್ಯ ಸರಕಾರ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲೂ ಲಾಕ್‌ಡೌನ್ ಹೇರಲು ಸರಕಾರ ಮುಂದಾಗಿದೆ. ಇದರ ಬೆನ್ನಲ್ಲೇ ರಾಜ್ಯದ ಹಲವು ನಗರಗಳು ಲಾಕ್‌ ಡೌನ್‌ಗೆ ಸಜ್ಜಾಗಿದೆ.

ಮಂಗಳೂರು- ಜಿಲ್ಲೆಯಾದ್ಯಂತ ಜುಲೈ 15 ರಿಂದ ಒಂದು ವಾರ ಲಾಕಡೌನ್ ಜಾರಿಯಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕಿತರು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದಕ್ಷಣ ಕನ್ನಡ ಜಿಲ್ಲೆಯನ್ನು ಬುಧವಾರ ರಾತ್ರಿಯಿಂದ ಒಂದು ವಾರ ಲಾಕ್ ಡೌನ್ ಮಾಡಲು ಜಿಲ್ಲಾಡಲಿತ ನಿರ್ಧರಿಸಿದೆ. ಲಾಕ್ ಡೌನ್ ಮಾರ್ಗಸೂಚಿಗಳನ್ನು ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಯವರು ಬಿಡುಗಡೆ ಮಾಡಲಿದ್ದಾರೆ ಎಂದರು.

ಧಾರವಾಡ- ಜಿಲ್ಲೆಯಲ್ಲಿ ಕೊರೊನಾ ಪ್ರಕಾರಣಗಳು ಹೆಚ್ಚುತ್ತಿದ್ದು ಭಯದ ವಾತಾವರಣ ವಿದೆ. ಹೀಗಾಗಿ ಲಾಕ್ ಡೌನ್ ಮಾಡಲು ಜನರಿಂದ ಒತ್ತಾಯ ಕೇಳಿಬಂದಿತ್ತು. ಈ ಬಗ್ಗೆ ಸಿ . ಎಂ . ಯಡಿಯೂರಪ್ಪ ಜೊತೆ ಚರ್ಚೆ ನಡೆಸಲಾಯ್ತು. ಲಾಕ್ ಡೌನ್ ಬಗ್ಗೆ ನಿರ್ಧರಿಸುವ ಅಧಿಕಾರ ನೀಡಿದ್ದಾರೆ. ಹೀಗಾಗಿ ಜುಲೈ 15ರ ಬೆಳಿಗ್ಗೆ 10 ಗಂಟೆಯಿಂದ 24 ನೇ ತಾರೀಖು ರಾತ್ರಿ 8 ಗಂಟೆ ಯವರೆಗೆ ಲಾಕ್ ಡೌನ್ ಜಾರಿಮಾಡುಲಾಗುತ್ತದೆ ಇದಕ್ಕೆ ಜನರು ಸಹಕರಿಬೇಕು ಎಂದು , ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಾದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶೆಟ್ಟರ್ ಲಾಕ್ ಡೌನ್ ಅವಧಿಯಲ್ಲಿ ನಿರ್ಮಾಣ ಕಾಮಕಾರಿ, ಕೈಗಾರಿಕೆ ಚಟುವಟಿಕೆಗಳು, ಜೀವನಾವಶ್ಯಕ ಪೂರೈಕೆಗೆ ವಿನಾಯಿತಿ
ನೀಡಾಲಾಗಿದೆ ಎಂದು ತಿಳಿಸಿದರು.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.