Visit Channel

ಭರವಸೆಯ ಬಿಹಾರ ಬಿಜೆಪಿ ಪ್ರಣಾಳಿಕೆ?

WhatsApp Image 2020-10-22 at 3.50.04 PM

ಪಟ್ನಾ, ಅ. 22: ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಗುರುವಾರ ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದರು.

ಬಿಹಾರದ 19 ಲಕ್ಷ ಜನರಿಗೆ ಉದ್ಯೋಗ ನೀಡುವ ಆಶ್ವಾಸನೆಯನ್ನು ನೀಡಲಾಗಿದೆ. ಅಲ್ಲದೇ, ರಾಜ್ಯದ ಪ್ರತಿಯೊಬ್ಬರಿಗೂ ಕೋವಿಡ್‌-19 ಲಸಿಕೆಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಪ್ರಣಾಳಿಕೆ ಒಳಗೊಂಡಿದೆ.

ಎನ್‌ಡಿಎ ಅಧಿಕಾರವಧಿಯಲ್ಲಿ ಬಿಹಾರದ ಜಿಡಿಪಿ ತೀವ್ರಗತಿಯಲ್ಲಿ ಏರಿಕೆ ಕಂಡಿದೆ. ಕಳೆದ 15 ವರ್ಷಗಳಲ್ಲಿ ರಾಜ್ಯದ ಜಿಡಿಪಿ ಶೇ.3 ರಿಂದ 11.3 ಕ್ಕೆ ಏರಿದೆ. ಅದು ಎನ್‌ಡಿಎ ಅವಧಿಯಲ್ಲಾಗಿದ್ದೇ ಹೊರತು, 15 ವರ್ಷಗಳ ‘ಜಂಗಲ್ ರಾಜ್’ ಆಡಳಿತದಲ್ಲಿ ಅಲ್ಲ ಎಂದು ನಿರ್ಮಲಾ ತಿಳಿಸಿದರು.

ಬಿಜೆಪಿ ಬಿಹಾರ್‌ ಅಧ್ಯಕ್ಷ ಸಂಜಯ್‌ ಜಸ್ವಾಲ್‌, ʻಪ್ರಣಾಳಿಕೆಯಲ್ಲಿ ಉಲ್ಲೇಖಿಸಿದಂತೆ 19 ಉದ್ಯೋಗದಲ್ಲಿ 3 ಲಕ್ಷ ಶಿಕ್ಷಕರ ಹುದ್ದೆ, 1 ಲಕ್ಷ ವೈದ್ಯಕೀಯ ಕ್ಷೇತ್ರಕ್ಕೆ (ಸರ್ಕಾರಿ ವಲಯ) ಆದ್ಯತೆ ನೀಡಲಾಗುವುದು. ಅಲ್ಲದೇ, ಬಿಹಾರ್‌ನಲ್ಲಿ ಐಟಿ ಹಾಗೂ ಕೃಷಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್‌ 10 ಲಕ್ಷ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದರು. ಆದರೆ, ಬಿಜೆಪಿ ʻಸಂಕಲ್ಪ ಪತ್ರʼ ಹೆಸರಿನಲ್ಲಿ ಈ ಸಂಖ್ಯೆಯನ್ನು 19 ಲಕ್ಷಕ್ಕೆ ಏರಿಸಿದೆ.

ಬಿಹಾರ್‌ ರಾಜ್ಯದಲ್ಲಿ 243 ವಿಧಾನಸಭಾ ಕ್ಷೇತ್ರಗಳಿಗೆ ಇದೇ ಅಕ್ಟೋಬರ್‌ 28, ನವೆಂಬರ್‌ 3 ಮತ್ತು 7ರಂದು ಮತದಾನ ನಡೆಯಲಿದೆ. ನವೆಂಬರ್‌ 10 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಬಿಜೆಪಿ ಪ್ರಣಾಳಿಕೆಯ ಭರವಸೆಗಳು:

  • 19 ಲಕ್ಷ ಉದ್ಯೋಗ ಅವಕಾಶ
  • ಬಿಹಾರ್‌ ರಾಜ್ಯದ ಪ್ರತಿಯೊಬ್ಬರಿಗೂ ಉಚಿತ ಕೋವಿಡ್‌-19 ಲಸಿಕೆ
  • 3 ಲಕ್ಷ ಶಿಕ್ಷಕರ ಹುದ್ದೆಗೆ ನೇಮಕಾತಿ
  • ಒಂದು ಕೋಟಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವುದು
  • ಆರೋಗ್ಯ ವಲಯದಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿ
  • 30 ಲಕ್ಷ ಮಂದಿಗೆ ಸೂರಿನ ಸೌಲಭ್ಯ
  • 9ನೇ ತರಗತಿಯಿಂದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಮಾತ್ರೆ

Latest News

Lorry driver
ಪ್ರಮುಖ ಸುದ್ದಿ

ಕುಡಿದು ಲಾರಿ ಚಾಲಕನ ಮೇಲೆ ಹಲ್ಲೆ ಮಾಡಿದ ಪೊಲೀಸರು ; ಕೇಸ್ ದಾಖಲಿಸಿಕೊಳ್ಳದೆ ಕಾನೂನು ಉಲ್ಲಂಘನೆ!

ಕುಡಿದ ಆಮಲಿನಲ್ಲಿದ್ದ ಮೂವರು ಪೊಲೀಸರು, “ನೀನು ಯಾವ ಸೀಮೆ ಡ್ರೈವರ್ ___*****” ಎಂದು ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೇ, ಚಾಲಕನ ಕೈ, ಕಾಲು ಸೇರಿದಂತೆ ಗುಪ್ತಾಂಗದ ಜಾಗಕ್ಕೆ ಒದ್ದು, ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ.

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.