ಮಂಗಳೂರು: ಭಾರತಕ್ಕೆ ಕೂಡ ವಕ್ಕರಿಸಿದ ಓಮ್ರಿಕಾನ್ ಆತಂಕದಿಂದ ಅಂತರಾಷ್ಟ್ರೀಯ ವಿಮಾನಯಾನಿಗಳ ಸಂಖ್ಯೆ ಕಡಿಮೆ ಆಗಿದೆ. ಅಂತರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗುತ್ತಿದೆ. ಅದೂ ಅಲ್ಲದೆ ಆರ್‌ಟಿಪಿಸಿಆರ್ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕಾಗುತ್ತದೆ. ಹಾಗೂ ಉಡುಪಿ ಜಿಲ್ಲಾಡಳಿತ ಹೋಂ ಕ್ವಾರಂಟೈನ್ ಘೋಷಿಸಿದೆ.
ಕ್ರಿಸ್‌ಮಸ್ ಮತ್ತು ಹೊಸ ವರ್ಷ ಆಚರಣೆಗೆಂದು ಭಾರತಕ್ಕೆ ಬರಲು ಮೊದಲೇ ಟಿಕೆಟ್ ಕಾಯ್ದಿರಿಸಿದವರಲ್ಲಿ ಅನೇಕರು ತಮ್ಮ ಪ್ರಯಾಣವನ್ನು ರದ್ದುಗೊಳಿಸಿದ್ದಾರೆ.ಇನ್ನು ಕೆಲವರು ಪ್ರಯಾಣವನ್ನು ಮುಂದೂಡಿದ್ಧಾರೆ. ಗಲ್ಫ್ ರಾಷ್ಟ್ರಗಳಿಂದ ಭಾರತಕ್ಕೆ ಈಗ 2 ರಿಂದ 3 ವಿಮಾನಗಳು ಆಗಮಿಸುತ್ತಿವೆ.