ಮತ್ತೆ ಕಪಿಲ್ ಶರ್ಮಾ ಶೋನಲ್ಲಿ ಮಿಂಚಿದ ಕಿಚ್ಚ ಸುದೀಪ್

ಇದೇ ಡಿಸೆಂಬರ್ 10ರಂದು ದೇಶದೆಲ್ಲೆಡೆ ತೆರೆಕಾಣುತ್ತಿರುವ ಮಲ್ಟಿಸ್ಟಾರ್ ಚಿತ್ರವೇ “ದಬಾಂಗ್-3”..ಈ ಚಿತ್ರದಲ್ಲಿ ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ್ ಸಲ್ಲುಮಿಯಾ ಜೊತೆಗೆ ಸೊನಾಕ್ಷಿ ಸಿನ್ಹಾ ಹಾಗೂ ಕನ್ನಡದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತು ನಟ ಪ್ರಭುದೇವ ಸಹ ಕಾಣಿಸಿಕೊಂಡಿದ್ದಾರೆ. ಚಿತ್ರೀಕರಣವನ್ನು ಪೂರ್ತಿಗೊಳಿಸಿ ತೆರೆ ಮೇಲೆ ಅಬ್ಬರಿಸಲು ಸಿದ್ಧವಾಗಿರುವ ಈ ಚಿತ್ರತಂಡ, ಸದ್ಯ ಪ್ರಮೋಶನ್ ಕಾರ್ಯದಲ್ಲಿ ಬ್ಯುಸಿಯಾಗಿದೆ.

ಅದ್ರಲ್ಲೂ ಬಾಲಿವುಡ್ ನ ಖ್ಯಾಥ ರಿಯಾಲಿಟಿ ಶೋನಲ್ಲಿಯೂ ಚಿತ್ರದ ಪ್ರಮೋಶನ್ ಭರ್ಜರಿಯಾಗೇ ನಡೆದಿದೆ. ಸಲ್ಮಾನ್ ಖಾನ್,  ಸೋನಾಕ್ಷಿ ಸಿನ್ಹಾ, ಕಿಚ್ಚ ಸುದೀಪ್, ಅರ್ಬಾಜ್ ಖಾನ್, ಪ್ರಭುದೇವ ಈ ಶೋ ನಲ್ಲಿ ಭಾಗವಹಿಸಿ, ತಮಾಷೆ ಮಾಡ್ತಾ ಕಾಲೆಳೆಯುತ್ತಾ ಚಿತ್ರದ ಬಗ್ಗೆ ಮಾತನಾಡಿದ್ದಾರೆ.

ಕನ್ನಡಕ್ಕೆ ಡಬ್ ಆಗುತ್ತಿರುವ ಈ ಚಿತ್ರದ ಕನ್ನಡ ವರ್ಶನ್ ಡೈಲಾಗ್ಸ್ ನ್ನು ಗುರುದತ್ ಗಾಣಿಗ ಬರೆದಿದ್ದು, ಚಿತ್ರದ 6 ಹಾಡುಗಳಿಗೆ ನಿರ್ದೇಶಕ ಅನೂಪ್ ಭಂಡಾರಿ ಹೊಸದಾಗಿ ಸಾಹಿತ್ಯ ಬರೆದಿದ್ದಾರೆ. ನಿರ್ಮಾಪಕ ಜಾಕ್ ಮಂಜು ರವರು ಕನ್ನಡ ಹಾಗೂ ಹಿಂದಿಯಲ್ಲಿ ಈ ಚಿತ್ರದ ಬಿಡುಗಡೆಯ ಹಕ್ಕನ್ನು ಪಡೆದುಕೊಂಡಿದ್ದಾರೆ.

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.