ನಕಲಿ ಮದ್ಯ ಸೇವಿಸಿ 86 ಮಂದಿ ಮೃತಪಟ್ಟಿರುವ ಘಟನೆ ಪಂಜಾಬ್‍ನಲ್ಲಿ ನಡೆದಿದ್ದು, ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಲು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಗೆ ಆದೇಶಿಸಿದ್ದಾರೆ.
ಕಳೆದ ಬುಧವಾರ ರಾತ್ರಿಯಿಂದ ಪಂಜಾಬ್‌ನ ಕೆಲ ಜಿಲ್ಲೆಗಳಲ್ಲಿ ದಿಢೀರೆಂದು ಸರಣಿ ಸಾವುಗಳು ಸಂಭವಿಸಲು ಆರಂಭವಾಗಿತ್ತು. ಈ ಬಗ್ಗೆ ವಿಚಾರಣೆ ನಡೆಸಿದಾಗ ನಕಲಿ ಮದ್ಯ ಸೇವನೆಯೇ ಈ ಎಲ್ಲಾ ಸಾವಿಗೂ ಕಾರಣ ಎಂದು ತಿಳಿದುಬಂದಿದೆ. ಅದರಲ್ಲೂ ಪಂಜಾಬಿನ ತರಣ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ 63 ಜನ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಇನ್ನೂ ಅಮೃತಸರದಲ್ಲಿ 12 ಹಾಗೂ ಬಟಾಲಾದಲ್ಲಿ 11 ಜನ ಮೃತಪಟ್ಟಿದ್ದಾರೆ.ಮೃತರ ಕುಟುಂಬಗಳಗೆ ತಲಾ 2 ಲಕ್ಷ ಪರಿಹಾರ ಘೋಷಿಸಿರುವ ಸರ್ಕಾರ, ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಅಬಕಾರಿ ಇಲಾಖೆ ಅಧಿಕಾರಿಗಳು, 6 ಪೊಲೀಸರನ್ನು ಅಮಾನತುಗೊಳಿಸಿದೆ. ಇನ್ನೂ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ತನಿಖೆಗೆ ಆದೇಶ ಹೊರಡಿಸಿದೆ. ಈ ಪ್ರಕರಣದಲ್ಲಿ ಶಾಮೀಲಾದವರ ಬಂಧನಕ್ಕೆ ಮುಂದಾಗಿದೆ.