• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಹಿಳಾ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ; ಸಿಎಂ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಮಹಿಳಾ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ; ಸಿಎಂ
0
SHARES
0
VIEWS
Share on FacebookShare on Twitter

ಬೆಂಗಳೂರು, ನ. 11: ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಹಾಗೂ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ನಿರ್ಭಯಾ ಯೋಜನೆಯಡಿ 751 ದ್ವೀಚಕ್ರ  ವಾಹನಗಳನ್ನು ರಾಜ್ಯ ಪೊಲೀಸ್ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮುಂಭಾಗದಲ್ಲಿ  ಇಂದು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಿರ್ಭಯ ಯೋಜನೆಯಡಿ ರಾಜ್ಯ ಪೊಲೀಸ್ ಇಲಾಖೆಗೆ 751 ದ್ವಿ-ಚಕ್ರ ವಾಹನಗಳನ್ನು ಹಸ್ತಾಂತರಿಸಿ ಮಾತನಾಡಿದ ಅವರು ಪೊಲೀಸ್ ಇಲಾಖೆಗೆ ಇದರಿಂದ ಮತ್ತಷ್ಟು ವೇಗವನ್ನು ನೀಡಿದಂತಾಗುತ್ತದೆ. ಬೆಂಗಳೂರಿನಂತ ಬೃಹತ್ ನಗರದಲ್ಲಿ ದ್ವೀಚಕ್ರ ವಾಹನಗಳು ಸುಲಭವಾಗಿ ಸಂಚರಿಸಬಲ್ಲವು, ಇದರಿಂದ ಅಪರಾಧಿಗಳನ್ನು ಹಿಡಿಯಲು ಸಹಾಯವಾಗುತ್ತದೆ ಎಂದು ಹೇಳಿದರು.

ದೇಶದಲ್ಲೆ ಕರ್ನಾಟಕ ರಾಜ್ಯ ಅತ್ಯುತ್ತಮ ಕಾನೂನು ಮತ್ತು ಸುವ್ಯವಸ್ಥೆ ಹೊಂದಿರುವ ರಾಜ್ಯವಾಗಿದೆ. ಮಹಿಳೆಯರ ಸುರಕ್ಷತೆಗಾಗಿ ಸರ್ಕಾರವು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬಿಎಂಟಿಸಿಯಲ್ಲಿ ಸುರಕ್ಷತಾ ಉಪಕರಣಗಳನ್ನು ಸಹ ಅಳವಡಿಸಿದೆ. ಮಹಿಳೆಯರ ಬಗೆಗಿನ ದೃಷ್ಷಿಕೋನವನ್ನು ಬದಲಾಯಿಸಲು ಎಲ್ಲರೂ ಒಗ್ಗೂಡಿ ಶ್ರಮಿಸಬೇಕೆಂದರು.

ನಿರ್ಭಯಾ ಯೋಜನೆಯಡಿ ಮಾನವ ಕಳ್ಳಸಾಕಾಣಿಕೆ ನಿಷೇಧ ದಳಗಳ ಸೃಜನೆಗಾಗಿ 30 ಕೇಂದ್ರಗಳಿಗೆ  51 ಮೋಟಾರ್ ಸೈಕಲ್‍ಗಳನ್ನು ಸಹ ಮಂಜೂರು ಮಾಡಲಾಗಿದೆ ಎಂದ ಅವರು, ಕೇಂದ್ರ ಸರ್ಕಾರವು ರಾಜ್ಯದಲ್ಲಿ 700 ಪೊಲೀಸ್ ಠಾಣೆಗಳಲ್ಲಿ ಮಹಿಳಾ ಸಹಾಯ ಕೇಂದ್ರಗಳನ್ನು ಪ್ರಾರಂಭಿಸಲು ಹಾಗೂ ಅದರ ನಿರ್ವಹಣೆಗಾಗಿ 7 ಕೋಟಿ ರೂ. ಗಳನ್ನು  ಒದಗಿಸಿದೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಒಂದು ವರ್ಷದಲ್ಲಿ ಕರ್ನಾಟಕ ರಾಜ್ಯ ಪೊಲೀಸರು ಅತ್ಯಂತ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಇಡೀ ರಾಷ್ಟ್ರದಲ್ಲಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಲ್ಲದೆ ಒಂದು ವರ್ಷದಲ್ಲಿ ಅಪರಾಧ ಪ್ರಕರಣಗಳು ಸಹ ಬಹಳಷ್ಟು ಕಡಿಮೆಯಾಗಿದೆ. ಡ್ರಗ್ ವಿರುದ್ಧದ ಸಮರ   ಯಶಸ್ವಿಯಾಗಿ ಮುಂದೆ ಸಾಗಿದ್ದು, ಮುಂದೆ ನಿರಂತರವಾಗಿ ನಡೆಯಲಿದೆ ಎಂದರು.

ಮುಖ್ಯಮಂತ್ರಿಗಳು ಇಲಾಖೆಯ  ಹಲವಾರು ಬೇಡಿಕೆಗಳನ್ನು ಈಡೇರಿಸಲು ಸಹಾಯ ಹಸ್ತವನ್ನು ನೀಡೀದ್ದು, ಸುಮಾರು 16 ಸಾವಿರ ಸಿಬ್ಬಂದಿ ನೇಮಕಾತಿಗೆ  ಅನುಮತಿ ನೀಡಿದ್ದಾರೆ.  ಬೆಂಗಳೂರು ನಗರ ಸುರಕ್ಷಿತ  ಯೋಜನೆ ಆದಷ್ಟು ಬೇಗನೆ ಕಾರ್ಯಗತವಾಗುತ್ತದೆ ಎಂದರು.

ಅಪರಾಧ ಪ್ರಕರಣಗಳಲ್ಲಿ ಮುಖ್ಯವಾಗಿ ಬೇಕಾಗಿರುವ  ಆಧುನಿಕವಾಗಿರುವಂತಹ ಎಫ್‍ಎಸ್‍ಎಲ್ ಲ್ಯಾಬ್ ಕೂಡ ಸಿದ್ಧವಾಗಿದ್ದು, ದೀಪಾವಳಿಯ ನಂತರ ಮುಖ್ಯಮಂತ್ರಿಗಳು ಉದ್ಘಾಟನೆ ಮಾಡಲಿದ್ದಾರೆ ಎಂದರು.
ಸಮಾರಂಭದಲ್ಲಿ ಒಳಾಡಳಿತ ಇಲಾಖೆಯ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ ಡಾ: ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನೀರಿಕ್ಷಕರಾದ ಪ್ರವೀಣ್ ಸೂದ್ ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.