Visit Channel

ಮುಖ್ಯಮಂತ್ರಿ ಚಂದ್ರು ಸೇರಿ ಐವರಿಗೆ ಮುರುಘಶ್ರೀ ಪ್ರಶಸ್ತಿ

chandru

ಚಿತ್ರದುರ್ಗ: ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಐವರು ʻಮುರುಘಾಶ್ರೀʼ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಚಿತ್ರದುರ್ಗದ ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವದಲ್ಲಿ ಪ್ರದಾನ ಮಾಡುವ ‘ಮುರುಘಾಶ್ರೀ’ ಪ್ರಶಸ್ತಿಗೆ ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನಟ ‘ಮುಖ್ಯಮಂತ್ರಿ’ ಚಂದ್ರು, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಬಿಲ್ಲಪ್ಪ, ಬಸವತತ್ವ ಪ್ರಚಾರಕರಾದ ಹುಲುಸೂರು ಗುರುಬಸವೇಶ್ವರ ಮಠದ ಶಿವಾನಂದ ಸ್ವಾಮೀಜಿ, ಮದ್ಯಪಾನ ವಿರೋಧಿ ಹೋರಾಟಗಾರ್ತಿ ಸ್ವರ್ಣ ಭಟ್‌ ಹಾಗೂ ಧರ್ಮದರ್ಶಿ ಎಸ್‌.ಷಣ್ಮುಖಪ್ಪ ಅವರು ಭಾಜನರಾಗಲಿದ್ದಾರೆ’ ಎಂದು ಶಿವಮೂರ್ತಿ ಮುರುಘಾ ಶರಣರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಹತ್ತು ಭಾಷೆಗಳಲ್ಲಿ ಮಾತನಾಡಬಲ್ಲ ಸಾಮರ್ಥ್ಯವನ್ನು ಹೊಂದಿರುವ 17 ವರ್ಷದ ಬಾಲಕಿ ಜಾಹ್ನವಿ ಪನ್ವಾರ್‌ ಅವರನ್ನು ‘ಭರಮಣ್ಣನಾಯಕ ಶೌರ್ಯʼ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುರುಘಾಶ್ರೀ ಹಾಗೂ ಭರಮಣ್ಣನಾಯಕ ಶೌರ್ಯ ಪ್ರಶಸ್ತಿಯು 25 ಸಾವಿರ ನಗದು ಹಾಗೂ ಫಲಕ ಒಳಗೊಂಡಿರುತ್ತದೆ. ಅ.24ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.