ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ದೆಹಲಿಗೆ

Share on facebook
Share on google
Share on twitter
Share on linkedin
Share on print

ಬೆಂಗಳೂರು, ನ. 17: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರ ಜೊತೆಗೆ ಸಮಾಲೋಚನೆ ನಡೆಸುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನ.18ರಂದು ದೆಹಲಿಗೆ ತೆರಳಲಿದ್ದಾರೆ.

ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿರುವ ಸಿಎಂ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಹಿನ್ನೆಲೆಯಲ್ಲಿ ನ.18ರಂದು ಬೆಳಗ್ಗೆ 11.30ಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ 10.30ಕ್ಕೆ ಹಿಂದೂಡಿಕೆ ಮಾಡಲಾಗಿದೆ.

Submit Your Article