Visit Channel

ಮುಜರಾಯಿ ಅರ್ಚಕ, ಸಿಬ್ಬಂದಿಗೆ ವಿಮಾ ಸೌಲಭ್ಯ

Archakas

ಬೆಂಗಳೂರು, .10: ಕೊರೋನಾ ಸಂಕಷ್ಟದಿಂದಾಗಿ ಅನೇಕ ಅರ್ಚಕರು ಬ್ರಾಹ್ಮಣರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದರು. ಆದರೆ ಇವರಿಗೆ ಯಾವುದೇ ಸೌಲಭ್ಯ ಸರ್ಕಾರದಿಂದ ಲಭಿಸಿರಲಿಲ್ಲ. ರಾಜ್ಯದ ಮುಜರಾಯಿ ಇಲಾಖೆಯ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ  ಹಾಗೂ ಕುಟುಂಬಕ್ಕೆ ಪಿಂಚಣಿ, ವಿಮಾ ಸೌಲಭ್ಯಗಳನ್ನು ನೀಡಲು ಇದೀಗ ಸರ್ಕಾರ ಮುಂದಾಗಿದೆ. ಮುಜರಾಯಿ ಇಲಾಖೆಯಲ್ಲಿರುವ ದೇವಾಲಯಗಳಲ್ಲಿ ಕೆಲಸ ಮಾಡುವ ಅರ್ಚಕರು ಹಾಗೂ ಸಿಬ್ಬಂದಿಗೆ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ಸರ್ಕಾರ ಘೋಷಣೆ ಮಾಡಿದೆ.

ರಾಜ್ಯದ ಸುಮಾರು 34,559 ದೇವಾಲಯಗಳು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರಲಿದ್ದು, ಈ ಎಲ್ಲಾ ದೇವಾಲಯಗಳ ಅರ್ಚಕರು ಹಾಗೂ ಸಿಬ್ಬಂದಿಗಳಿಗೆ ಪಿಂಚಣಿ, ಆರೋಗ್ಯ ವಿಮೆ, ಜೀವ ವಿಮೆಯಂತಹ ಸೌಲಭ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿನ 34,559 ದೇವಾಲಯಗಳು ಮುಜರಾಯಿ ಇಲಾಖೆಯಡಿ ಬರಲಿದ್ದು ಅವುಗಳಲ್ಲಿ 175 ವರ್ಗ-ಎ (ವಾರ್ಷಿಕ 25 ಲಕ್ಷ ರೂ.) 163 ವರ್ಗ-ಬಿ (ವಾರ್ಷಿಕ 5-25 ಲಕ್ಷ ರೂ.) ಮತ್ತು 34,221 ಗಳು ವರ್ಗ-ಸಿ (ವಾರ್ಷಿಕ 5 ಲಕ್ಷ ರೂ.ಗಿಂತ ಕಡಿಮೆ) ದೇವಾಲಯಗಳಾಗಿವೆ. ಸುಮಾರು 50 ಸಾವಿರ ಪ್ರಧಾನ ಅರ್ಚಕರು, ಗ್ರೂಪ್ ಸಿ ಮತ್ತು ಡಿ ನೌಕರರು ಮುಜರಾಯಿ ದೇವಾಲಯಗಳಲ್ಲಿ ಕೆಲಸ ಮಾಡುತ್ತಾರೆ. ಆದರೆ ಅವರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲಾಗುವುದಿಲ್ಲ. ಅವರ ವೇತನವನ್ನು ಆಯಾ ದೇವಾಲಯದ ಟ್ರಸ್ಟ್‌ಗಳು  ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ತಿಂಗಳ ಅಂತ್ಯದ ವೇಳೆಗೆ ಸರ್ಕಾರ ಈ ಯೋಜನೆಯನ್ನು ಪ್ರಕಟಿಸುವ ಸಾಧ್ಯತೆಗಳಿವೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಇದಕ್ಕಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ದೇವಾಲಯದ ಸಿಬ್ಬಂದಿಯ ಆರೋಗ್ಯ ಮತ್ತು ಸಾವಿನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.ಸಮೀಕ್ಷೆಯ ವರದಿಯ ಆಧಾರದ ಮೇಲೆ ವಿಮೆಯನ್ನು ಸಜ್ಜುಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

 

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.