ಮುಲಾಯಂ ಸಿಂಗ್ ಯಾದವ್‌ಗೆ ಕೊರೊನಾ ಸೋಂಕು ದೃಢ

ಲಕ್ನೋ, .15: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ ಎಂಬುದು ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಅಸ್ವಸ್ಥರಾಗಿ ಚಿಕಿತ್ಸೆ ಪಡೆದಿದ್ದ ಮುಲಾಯಂ ಸಿಂಗ್ ಯಾದವ್ ಲಕ್ನೋದ ತಮ್ಮ ನಿವಾಸದಲ್ಲಿ ವಿಶ್ರಾಂತಿಯಲ್ಲಿದ್ದರು. ವಯೋ ಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದಾರೆ. ಸಮಾಜವಾದಿ ಪಕ್ಷದ ನಾಯಕರಿಗೆ ಕೋವಿಡ್ -19 ವೈರಸ್ ಸೋಂಕಿನ ಮುಖ್ಯ ಲಕ್ಷಣಗಳು ಕಂಡು ಬರದಿದ್ದರೂ ಅವರಿಗೆ ಸಾಂಕ್ರಾಮಿಕ ರೋಗ ಇರುವುದು ದೃಢಪಟ್ಟಿದೆ. ಅಗತ್ಯವಾದ ಎಲ್ಲಾ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೆಡಾಂಟ ಆಸ್ಪತ್ರೆಯ ತಜ್ಞ ವೈದ್ಯರೊಬ್ಬರು ತಿಳಿಸಿದ್ದಾರೆ.

Latest News

ದೇಶ-ವಿದೇಶ

ಒಡಿಶಾದಲ್ಲಿ ಆಘಾತಕಾರಿ ಘಟನೆ ; ಹಾಡಹಗಲೇ ವೃದ್ಧನನ್ನು ಕಂಬಕ್ಕೆ ಕಟ್ಟಿ, ಥಳಿಸಿ ಕೊಂದ ಕುಟುಂಬಸ್ಥರು!

ಕೊರಾಪುಟ್ ಜಿಲ್ಲೆಯ ಬುಡಕಟ್ಟು ಪ್ರದೇಶದಲ್ಲಿ ಹಾಡಹಗಲೇ ವೃದ್ಧನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ತಮ್ಮ ಕುಟುಂಬಸ್ಥರೇ ಥಳಿಸಿ ಕೊಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!

ಮಾಹಿತಿ

ಕಿಡ್ನಿ ಸ್ಟೋನ್‌ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ

ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.

ಮಾಹಿತಿ

ದೇಹಕ್ಕೆ ಪ್ರೋಟಿನ್‌ ಕೊರತೆಯಾದ್ರೆ `ಈ’ 10 ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ

ಯುವಜನರ ದೈಹಿಕ ಬೆಳವಣಿಗೆಯಲ್ಲಿ ಪ್ರೋಟಿನ್‌ ಪ್ರಮುಖ ಪಾತ್ರ ವಹಿಸುತ್ತದೆ. ದೇಹದಲ್ಲಿನ ಸ್ನಾಯುಗಳು, ಕಿಣ್ವಗಳು ಮತ್ತು ಹಾರ್ಮೋನುಗಳಿಗೆ ಪ್ರೋಟಿನ್ ಅತ್ಯಂತ ಅವಶ್ಯಕವಾಗಿದೆ.