Visit Channel

ಮೂರು ಮಕ್ಕಳ ಜೊತೆ ತಂದೆ ನೇಣಿಗೆ ಶರಣು

suicide-1-800x445

ಬೆಂಗಳೂರು, ನ. 13: ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದ್ದು, ತನ್ನ ಮೂರು ಮಕ್ಕಳನ್ನು ನೇಣಿಗೆ ಹಾಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಘೋರ ಕೃತ್ಯ ನಡೆದಿರುವುದು ಬೆಂಗಳೂರಿನ ಮೈಕೋ ಲೇಔಟ್‌ನ ರಮಣಶ್ರೀ ಎನ್ ಕ್ಲೇವ್‌ನಲ್ಲಿ. ಈ ಅಪಾರ್ಟಮೆಂಟ್‌ನ ಸೆಕ್ಯುರಿಟಿ ಗಾರ್ಡ್ ಆಗಿದ್ದ ಜನಕರಾಜ್ ಬಿಸ್ತಾ (32) ಈ ಕೃತ್ಯ ಎಸಗಿದ ಅಪರಾಧಿ.

ಬೆಳಿಗ್ಗೆಯಿಂದ ಹೊರಗಡೆ ಎಲ್ಲಾ ಓಡಾಡಿದ ಜನಕರಾಜ್ 11.30 ರ ಸುಮಾರಿಗೆ ತನ್ನ ಮೂವರು ಮಕ್ಕಳಾದ ಸರಸ್ವತಿ (14) ಹೇಮಾವತಿ(9) ಹಾಗೂ ರಾಜ್ ಕುಮಾರ್ (3) ರನ್ನು  ನೇಣಿಗೆ ಹಾಕಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲ್ವರ ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಮೈಕೋ ಲೇಔಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೀವನದಲ್ಲಿ ಜಿಗುಪ್ಸೆ ಬಂದು ಅತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ. ಎರಡು ತಿಂಗಳ ಹಿಂದೆ ಜನಕರಾಜ್ ಪತ್ನಿ ನಂದಾದೇವಿಯೂ ಆತ್ಮಹತ್ಯೆಗೆ ಶರಣಾಗಿದ್ದಳು. ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ಜನಕರಾಜ್ ಮಕ್ಕಳನ್ನು ನೇಣಿಗೆ ಹಾಕಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Latest News

Lal singh chadda
ಮನರಂಜನೆ

“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

Medical Test
ಮಾಹಿತಿ

ಮದುವೆಗೂ ಮುನ್ನ ಈ ವೈದ್ಯಕೀಯ ಪರೀಕ್ಷೆಗಳನ್ನು ತಪ್ಪದೇ ಮಾಡಿಸಿಕೊಳ್ಳಿ ; ಅನುವಂಶಿಕ ಕಾಯಿಲೆಗಳನ್ನು ಪತ್ತೆ ಮಾಡಿ

ಕೆಲ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವುದರಿಂದ ಆನುವಂಶಿಕ ಕಾಯಿಲೆಗಳು ಪತ್ತೆ ಮಾಡಿ, ಅವುಗಳಿಗೆ ಚಿಕಿತ್ಸೆಯನ್ನು ಕೂಡ ಪಡೆದುಕೊಳ್ಳಬಹುದು.

Siddaramaiah
ರಾಜಕೀಯ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ ಜೈಲೂಟ ತಿನ್ನುತ್ತಿದ್ದರು : ಬಿಜೆಪಿ

ಲೋಕಾಯುಕ್ತವೇ ಇದ್ದಿದ್ದರೆ ಮಜಾವಾದಿ ಸಿದ್ದರಾಮಯ್ಯ(Siddaramaiah) ಜೈಲೂಟ ತಿನ್ನುತ್ತಿದ್ದರು ಎಂದು ರಾಜ್ಯ ಬಿಜೆಪಿ(State BJP) ವ್ಯಂಗ್ಯವಾಡಿದೆ.

Gaalipata 2
ಮನರಂಜನೆ

ತೆರೆಯ ಮೇಲೆ ಹಾರಿದ ‘ಗಾಳಿಪಟ-2’; ಗಣಿ-ಭಟ್ರು ಕಾಂಬಿನೇಷನ್‍ಗೆ ಶಿಳ್ಳೆ-ಚಪ್ಪಾಳೆ

ಯೋಗರಾಜ್ ಭಟ್ ಮತ್ತು ‘ಗೋಲ್ಡನ್ ಸ್ಟಾರ್’ ಗಣೇಶ್ ಅವರ ಕಾಂಬಿನೇಷನ್ ಹೇಗೆ ಮೂಡಿಬಂದಿದೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕುತೂಹಲದಿಂದ ಚಿತ್ರಮಂದಿರದತ್ತ ಹೆಜ್ಜೆ ಹಾಕಿದ್ದಾರೆ.