ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಭಾಗಗಳಲ್ಲಿ ಹಾಗೂ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಕೆಲದಿನಗಳ ಕಾಲ ಲಾಕ್‍ಡೌನ್ ಮಾಡುವಂತೆ ಶಾಸಕ ಸಾ.ರಾ. ಮಹೇಶ್, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.
ವಿಶ್ವದೆಲ್ಲೆಡೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಎಲ್ಲೆಡೆ ಆತಂಕ ಮೂಡಿಸಿದೆ. ಅದೇ ರೀತಿಯಲ್ಲಿ ಮೈಸೂರು ಜಿಲ್ಲೆಯಲ್ಲೂ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈಗಾಗಲೇ ಒಂದು ಸಾವಿರ ಗಡಿದಾಟಿದೆ. ಅದರಲ್ಲೂ ಕಳೆದ ಒಂದು ವಾರದಲ್ಲಿ 563 ಪ್ರಕರಣಗಳು ವರದಿಯಾಗಿದ್ದು, 40 ಮಂದಿ ಮೃತಪಟ್ಟಿದ್ದಾರೆ. ಇವೆಲ್ಲವು ಮೈಸೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರ ಸೂಚನೆಯಾಗಿದೆ. ಮೈಸೂರು ನಗರದ ಕೆಲವು ಭಾಗಗಳಲ್ಲಿ ಸೋಂಕಿತರು ಹಾಗೂ ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಈ ಪ್ರದೇಶದ ಜನರು ಗ್ರಾಮಾಂತರ ಪ್ರದೇಶಗಳಿಗೂ ಸಂಚರಿಸುವುದರಿಂದ ಗ್ರಾಮೀಣ ಪ್ರದೇಶಕ್ಕೂ ಸೋಂಕು ಹೆಚ್ಚಾಗಿ ಹರಡುವ ಸಾಧ್ಯತೆ ಇದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಲಾಕ್‍ಡೌನ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗುತ್ತಿರುವ ಭಾಗಗಳಲ್ಲಿ ಹಾಗೂ ಜಿಲ್ಲೆಯ ಗ್ರಾಮಾಂತರ ಭಾಗಗಳಲ್ಲಿ ಕೆಲದಿನಗಳ ಕಾಲ ಲಾಕ್‍ಡೌನ್ ಮಾಡುವಂತೆ ಶಾಸಕ ಸಾ.ರಾ. ಮಹೇಶ್, ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
==============