ಮೈಸೂರು,ಸೆ.17: ಇಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜನುಮದಿನ..ಈ ನಿಟ್ಟಿನಲ್ಲಿ ಮೋದಿಯವರ ಹೆಸರಿನಲ್ಲಿ ಬಿಜೆಪಿ ನಾಯಕರು, ಅಭಿಮಾನಿಗಳು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಪುನಸ್ಕಾರಗಳನ್ನು ಕೈಗೊಂಡಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ,ಮೋದಿಜೀ ಹುಟ್ಟುಹಬ್ಬದ ನಿಮಿತ್ತ ಚಾಮುಂಡಿಬೆಟ್ಟಕ್ಕೆ ತೆರಳಿ, ನಾಡದೇವತೆ ಚಾಮುಂಡಿತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಜೆಡಿಎಸ್ ಶಾಸಕ, ಮಾಜಿ ಸಚಿವ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ್ ಸಿಂಹ, ಎಲ್,ನಾಗೇಂಧ್ರ ಸೇರಿದಂತೆ ಅನೇಕರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಈ ವಿ¸ಶೇಷ ದಿನದಂದು ಸಾಮಾಜಿಕ ಜಾಲತಾಣದ ಮೂಲಕವೂ ಪ್ರಧಾನಿಯವರಿಗೆ ಹುಟ್ಟುಹಬ್ಬದ ಶುಭಾಸಯಗಳನ್ನು ತಿಳಿಸಿದರು.