ಮೋದಿ, ರಾಹುಲ್ ಬಿರುಸಿನ ರಾಲಿ

ಪಾಟ್ನಾ, ಅ. 23: ಬಿಹಾರದಲ್ಲಿ ಚುನಾವಣಾ ಪ್ರಚಾರ ಗರಿಗೆದರಿದ್ದು, ಇಂದು ಬಿಹಾರದಲ್ಲಿ ಎನ್​ಡಿಎ ಪರ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಪರ ರಾಹುಲ್ ಗಾಂಧಿ ಬೃಹತ್  ರಾಲಿಯನ್ನು ನಡೆಸಲಿದ್ದಾರೆ. ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಜನರನ್ನುದ್ದೇಶಿಸಿ ಮಾತನಾಡುವ ಮೂಲಕ ಮತಯಾಚನೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಸಾರ್ವಜನಿಕ ಸಭೆಗಳು ನಡೆಯುತ್ತಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಎಲ್ಲಾ ಪಕ್ಷದ ಸಂಘಟಕರು ತಿಳಿಸಿದ್ದಾರೆ.

ನಿತೀಶ್ ಕುಮಾರ್ ನೇತೃತ್ವದ ಎನ್​ಡಿಎ ಒಕ್ಕೂಟದ ಪರ ಪ್ರಧಾನಿ ನರೇಂದ್ರ ಮೋದಿ ಅವರು ದೆಹ್ರಿ-ಆನ್ ಸೋನ್, ಗಯಾ ಮತ್ತು ಭಾಗಲ್ಪುರದಲ್ಲಿ ಮೂರು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದರ ಕುರಿತಾಗಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿದ್ದಾರೆ. ಇದೇ ವೇಳೆ ಸಿಎಂ ನಿತೀಶ್ ಕುಮಾರ್ ಅವರು ಡೆಹ್ರಿ ಮತ್ತು ಭಾಗಲ್ಪುರದಲ್ಲಿ ನಡೆಯುವ ರ‍್ಯಾಲಿಗಳಲ್ಲಿ ಪ್ರಧಾನಿ ಮೋದಿ ಅವರನ್ನು ಸೇರುವ ನಿರೀಕ್ಷೆಯಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ ಸಹ ಇಂದಿನಿಂದ ಬಿಹಾರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ  ರ‍್ಯಾಲಿಗಳನ್ನು ನಡೆಸಲು ಯೋಜನೆ ರೂಪಿಸಿದ್ದಾರೆ. ಅವರು ನವಾಡಾದ ಹಿಸುವಾ ಮತ್ತು ಭಾಗಲ್ಪುರ್ ಜಿಲ್ಲೆಯ ಕಹಲ್ಗಾಂವ್ನಲ್ಲಿ ಎರಡು ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.  

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.