ನವದೆಹಲಿ ಸೆ 17 : ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಸಾಕಷ್ಟು ಕಾರ್ಯ ಕ್ರಮಗಳನ್ನು ಆಯೋಜಿಸಿದ್ದಾರೆ. ಹಾಗೆ ಅವರ ಹುಟ್ಟು ಹಬ್ಬಕ್ಕೆ ಹಲವು ರಾಜಕಾರಣಿಗಳು, ಚಿತ್ರನಟರು ಹೀಗೆ ಹಲವು ರಂಗದವರು ಕೂಡ ಟ್ವೀಟ್ ಮುಖೇನ ಶುಭಾಶಯ ಕೋರುತ್ತಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಕೇವಲ ಒಂದೇ ವಾಕ್ಯದಲ್ಲಿ ಶುಭಾಶಯ ಕೋರಿದ್ದಾರೆ. ಹ್ಯಾಪಿ ಬರ್ತ ಡೇ ಮೋದಿಜಿ ಎಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ, ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. ನರೇಂದ್ರ ಮೋದಿ ಅವರು 71 ನೇ ವಸಂತಕ್ಕೆ ಕಾಲಿಟ್ಟಿ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಸೇರಿಂದತೆ ಹಲವು ಗಣ್ಯರು ಮೋದಿ ಅವರಿಗೆ ವಿಶ್ ಮಾಡಿದ್ದಾರೆ.
ಕಾಂಗ್ರೆಸ್‌ನಿಂದ ಟಾಂಗ್ : ಇತ್ತ ಮೋದಿ ಹುಟ್ಟುಹಬ್ಬಕ್ಕೆ ಬಿಜೆಪಿ ಅವರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರೆ, ಅತ್ತ ಕಾಂಗ್ರೆಸ್ ನರೇಂದ್ರ ಮೋದಿಯವರ ಹುಟ್ಟುಹಬ್ಬದ ನಿಮಿತ್ತ ರಾಷ್ಟ್ರೀಯ ನಿರುದ್ಯೋಗ ದಿನವನ್ನು ಹಮ್ಮಿಕೊಂಡಿದ್ದು, ಅದರ ಅಂಗವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಒಂದೇ ವರ್ಷದ ನಿರುದ್ಯೋಗ ಸಮಸ್ಯೆ ಶೇ.2.4ರಿಂದ 10.3ಕ್ಕೆ ಏರಿಕೆಯಾಗಿದೆ ಜೊತೆಗೆ ಒಂದು ವರ್ಷದಲ್ಲಿ 2 ಕೋಟಿ ಉದ್ಯೋಗ ಒದಗಿಸುವ ಭರವಸೆ ನೀಡಿಯೇ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ ಆದರೆ ಈಗ ದೇಶದ ಯುವಕರು ನಿರುದ್ಯೋಗದಿಂದ ಕಂಗಾಲಾಗಿ ಬೀದಿಬೀದಿಗಳಲ್ಲಿ ಅಲೆಯುತ್ತಿದ್ದಾರೆ. ಎಂದು ಕಾಂಗ್ರೆಸ್ ಆರೋಪಿಸಿದೆ.