ಬೆಂಗಳೂರು, ಅ. 29: ಈಗಾಗಲೇ ಬೆಂಗಳೂರಿಗರು ವರುಣನ ಆರ್ಭಟದಿಂದ ತತ್ತರಿಸಿ ಹೋಗಿದ್ದಾರೆ. ಇದರ ಮಧ್ಯೆಯೂ ಇಂದಿನಿಂದ ನವೆಂಬರ್ 3ರವರೆಗೆ ಭಾರಿ ಮಳೆ ಬೀಳಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂಬುದಾಗಿ ಮತ್ತೊಂದು ಶಾಕ್ ನೀಡಿದೆ.
ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಬಿಡುಗಡೆ ಮಾಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ, ಬೆಂಗಳೂರಿನಲ್ಲಿ ಇಂದಿನಿಂದ ನವೆಂಬರ್ 3ರವರೆಗೆ ಮೂರು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ. ಹೀಗಾಗಿ ನಗರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.