ರಾಜ್ಯದಲ್ಲಿಂದು ಕೊರೊನಾ ಚೇತರಿಕೆ ಪ್ರಮಾಣ ಏರಿಕೆ

ಬೆಂಗಳೂರು, ನ. 09: ಕೊರೊನಾ ಪ್ರಮಾಣವು ರಾಜ್ಯದಲ್ಲಿ ಇಳಿಮುಖವಾಗಿದ್ದು, ರಾಜ್ಯದಲ್ಲಿ ಕೊರೋನಾ ಚೇತರಿಕೆ ಪ್ರಮಾಣವು ಅಧಿಕವಾಗುತ್ತಿದ್ದು,  ಇಂದು 2,360 ಮಂದಿ ಚೇತರಿಸಿಕೊಂಡಿದ್ದಾರೆ. ಇನ್ನು ಇಂದು 2,740 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 8,46,887ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ವೈರಸ್‌ನಿಂದಾಗಿ ಕಳೆದ 24 ಗಂಟೆಯಲ್ಲಿ 22 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 11,391ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು 2,360 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 8,01,799ಕ್ಕೆ ಏರಿಕೆಯಾಗಿದೆ. 33,678 ಮಂದಿ ನಿಗದಿತ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1,579 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,49,327ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 11 ಮಂದಿ ಸಾವನ್ನಪ್ಪಿದ್ದಾರೆ.

ಬಾಗಲಕೋಟೆಯಲ್ಲಿ 7, ಬಳ್ಳಾರಿಯಲ್ಲಿ 53, ಬೆಳಗಾವಿಯಲ್ಲಿ 40, ಬೆಂಗಳೂರು ಗ್ರಾಮಾಂತರದಲ್ಲಿ 19, ಬೀದರ್ ನಲ್ಲಿ 8, ಚಾಮರಾಜನಗರದಲ್ಲಿ 17, ಚಿಕ್ಕಬಳ್ಳಾಪುರದಲ್ಲಿ 6, ಚಿಕ್ಕಮಗಳೂರಿನಲ್ಲಿ 25, ಚಿತ್ರದುರ್ಗದಲ್ಲಿ 106, ದಕ್ಷಿಣ ಕನ್ನಡದಲ್ಲಿ 78, ದಾವಣಗೆರೆಯಲ್ಲಿ 39, ಧಾರವಾಡದಲ್ಲಿ 60, ಗದಗದಲ್ಲಿ 11, ಹಾಸನದಲ್ಲಿ 95, ಹಾವೇರಿಯಲ್ಲಿ 7, ಕಲಬುರಗಿಯಲ್ಲಿ 32, ಕೊಡಗಿನಲ್ಲಿ 40 ಪ್ರಕರಣಗಳು ವರದಿಯಾಗಿವೆ.

ಕೋಲಾರದಲ್ಲಿ 21, ಕೊಪ್ಪಳದಲ್ಲಿ 2, ಮಂಡ್ಯದಲ್ಲಿ 111, ಮೈಸೂರಿನಲ್ಲಿ 135, ರಾಯಚೂರಿನಲ್ಲಿ 32, ರಾಮನಗರದಲ್ಲಿ 11, ಶಿವಮೊಗ್ಗದಲ್ಲಿ 40, ತುಮಕೂರಿನಲ್ಲಿ 46,  ಉಡುಪಿಯಲ್ಲಿ 42, ಉತ್ತರಕನ್ನಡದಲ್ಲಿ 13, ವಿಜಯಪುರದಲ್ಲಿ  39, ಯಾದಗಿರಿಯಲ್ಲಿ 26 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

Latest News

ರಾಜಕೀಯ

`ಬ್ಲ್ಯಾಕ್‌ ಮೇಲ್‌ ಕುಮಾರಸ್ವಾಮಿʼ ; ಕಣ್ಣೀರ ಕೋಡಿಯಿಂದ ಕುಟುಂಬಕ್ಕೆ ಲಾಭವೇ ಹೊರತು ಜನತೆಗೇನು ಲಾಭ? : ಅಶ್ವಥ್ ನಾರಾಯಣ್‌

ನೀವು ಈವರೆಗೆ ಹೇಳಿದ ಸುಳ್ಳುಗಳನ್ನು ಎಣಿಸಲು ಸಾಧ್ಯವೇ? ಎಂದು ಸಚಿವ(Minister) ಅಶ್ವಥ್‌ ನಾರಾಯಣ್(Ashwath Narayan) ಪ್ರಶ್ನಿಸಿದ್ದಾರೆ.

ದೇಶ-ವಿದೇಶ

ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದ ಭಾರತೀಯ ಸೇನೆ ; ದಾಳಿಯಲ್ಲಿ ಮೂವರು ಯೋಧರು ಹುತಾತ್ಮ!

ಸ್ವಾತಂತ್ರ್ಯ ದಿನಾಚರಣೆ(Independence Day) ಸಂದರ್ಭದಲ್ಲಿ ಉಗ್ರರು ದೇಶದ ವಿವಿಧ ಭಾಗಗಳಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.

ದೇಶ-ವಿದೇಶ

‘ಡಾನಿ’ ಬುಡಕಟ್ಟು ಜನಾಂಗದಲ್ಲಿ ಬೆರಳನ್ನು ಕತ್ತರಿಸುವುದೇ ಸಂಪ್ರದಾಯವಂತೆ!

ಇಂಡೋನೇಷ್ಯಾದ, ಪಪುವಾ ಗಿನಿಯಾ ದ್ವೀಪದಲ್ಲಿ ವಾಸಿಸುವ ಎಲ್ಲಾ ಡಾನಿ ಬುಡಕಟ್ಟಿನ ಮಹಿಳೆಯರನ್ನು ಕತ್ತರಿಸಿದ ಬೆರಳುಗಳಿಂದ ಬದುಕಲು ಒತ್ತಾಯಿಸಲಾಗುತ್ತದೆ.

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?