Visit Channel

ರಾಜ್ಯದಲ್ಲಿ ಕೊರೊನಾಗೆ ಮೊದಲ ಪೋಲಿಸ್ ಸಾವು     

COVID-suicide-14 (1)

ಬೆಂಗಳೂರು ಜೂನ್ 16: ಕೊರೊನಾ ವೈರಸ್ ಮಹಾಮಾರಿಗೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೊದಲ 59 ವರ್ಷ ವಯಸ್ಸಿನ ಎಎಸ್ಐ  ಬಲಿಯಾಗಿದ್ದಾರೆ. ಹಾಗೂ ಮತ್ತೊಂದು ಎಎಸ್ಐಗೆ ಕೊರೊನಾ ಪಾಸಿಟಿವ್   ಬಂದಿದೆ

ಬೆಂಗಳೂರಿನ ವಿವಿ ಪುರಂ ಪೊಲೀಸ್ ಠಾಣೆಯ ಸಂಚಾರಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಎಸ್ಐ ಜೂನ್ 13 ರಂದು ಮೃತಪಟ್ಟಿದ್ದರು. ಡಯಾಬಿಟೀಸ್ನಿಂದ ಬಳಲುತ್ತಿದ್ದ ಎಎಸ್ಐ ಮನೆಯಲ್ಲೇ ಕೊನೆಯುಸಿರೆಳೆದಿದ್ದರು.

ಸಾವಿನ ಬಳಿಕ ಮರಣೋತ್ತರ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಈ ವೇಳೆ ಅಧಿಕಾರಿಗೆ ಕೊರೊನಾ ತಗುಲಿರುವುದು ದೃಢವಾಗಿತ್ತು. ಇದೇ ಪೊಲೀಸ್ ಠಾಣೆಯ ಸಂಚಾರಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮತ್ತೊಬ್ಬ   ಎಎಸ್ಐ ಅಧಿಕಾರಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಮೂರು ದಿನಗಳ ಹಿಂದೆ ರೋಗ ಲಕ್ಷಣ ಕಾಣಿಸಿಕೊಂಡಿದ್ದ ಹಿನ್ನೆಲೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ, ಪರೀಕ್ಷೆಯ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಇಬ್ಬರು ಎಎಸ್ಐಗೆ ಕೊವಿಡ್ ಖಚಿತವಾಗಿರುವ ಹಿನ್ನೆಲೆ ಇಡೀ ಪೊಲೀಸ್ ಠಾಣೆಯನ್ನು ಬಿ.ಬಿ.ಎಂ.ಪಿ ಸೀಲ್ ಡೌನ್ ಮಾಡಿದೆ, ಎಲ್ಲರನ್ನೂ ಕ್ವಾರಂಟೈನ್ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ

ಬೆಂಗಳೂರು ನಗರದಲ್ಲಿ ಇವರೆಗೆ 13 ಪೊಲೀಸರಿಗೆ ಸೋಂಕು. ಒಟ್ಟು 13 ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್. ಇದೇ ಮೊದಲ ಬಾರಿಗೆ ಓರ್ವ ಪೊಲೀಸ್ ಸಾವು.ಪೊಲೀಸರಲ್ಲಿ ಮತ್ತಷ್ಟು ಹೆಚ್ಚಿಸಿದ    ಆತಂಕ.ಮೊದಲು  ಪಾಸಿಟಿವ್ ವರದಿಯಾದಾಗ ಭೀತಿಗೊಳಗಾಗಿದ್ದ ಪೊಲೀಸರು.ಇದೀಗ ಓರ್ವ ಎಎಸ್ಐ ಸಾವಿನಿಂದ ಮತ್ತಷ್ಟು ಆತಂಕ ಮನೆಮಾಡಿದೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.