Visit Channel

ರಾಜ್ಯದಲ್ಲಿ ಟ್ರ್ಯಾಕ್ಟರ್‌ ಏರಲಿದ್ದರಾ ರಾಹುಲ್‌?

rahul-gandhi-wayanad

ದಾವಣಗೆರೆ, ಅ.20: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ನವೆಂಬರ್‌ 7 ಮತ್ತು 8 ರಂದು ರಾಜ್ಯದಲ್ಲಿ ನಡೆಸಲಿದ್ದಾರೆ ಎಂದು ಕಿಸಾನ್‌ ಕಾಂಗ್ರೆಸ್‌ ಘಟಕದ ರಾಜ್ಯಾಧ್ಯಕ್ಷ ಸಚಿನ್‌ ಮಿಗಾ ತಿಳಿಸಿದ್ದಾರೆ.

ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ವಿದ್ಯುತ್‌ ಕಾಯ್ದೆ ವಿರುದ್ಧ ರಾಹುಲ್‌ ಗಾಂಧಿ ಅವರು ಪಂಜಾಬ್‌ ಮಾದರಿಯಲ್ಲೇ ಕರ್ನಾಟಕದಲ್ಲೂ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ರೈತ ವಿರೋಧಿ ನೀತಿ ಖಂಡಿಸಿ ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಸಹಿ ಸಂಗ್ರಹ ಚಳವಳಿ ನಡೆಸಲಾಗುವುದು. ಸಹಿ ಸಂಗ್ರಹ ಚಳವಳಿ ಹುಬ್ಬಳ್ಳಿಯಿಂದ ಹುಳಿಯಾರ್‌ ಮೂಲಕ ಬೆಳಗಾವಿಗೆ ಮತ್ತು ದಾವಣಗೆರೆಯಿಂದ ಚನ್ನಗಿರಿ ಮೂಲಕ ಶಿವಮೊಗ್ಗ ಜಿಲ್ಲೆಯ ಕಾಗೋಡು ತಲುಪುವುದು. ಈ ಎರಡು ಮಾರ್ಗಗಳಲ್ಲಿ ಒಂದನ್ನು ರಾಹುಲ್‌ ಗಾಂಧಿ ಅವರು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಅವರು ಇವೆರಡರಲ್ಲಿ ಒಂದು ಮಾರ್ಗವನ್ನು ಅಂತಿಮಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

Latest News

Pakistan
ದೇಶ-ವಿದೇಶ

ಪಾಕಿಸ್ತಾನ : ಗರ್ಭಿಣಿ ಮಹಿಳೆ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ; ಭಾರೀ ಆಕ್ರೋಶ

ನೋಮನ್ ಗ್ರ್ಯಾಂಡ್ ಸಿಟಿ ಅಪಾರ್ಟ್ಮೆಂಟ್ ಕಟ್ಟಡದ ಹೊರಗೆ ಭದ್ರತಾ ಸಿಬ್ಬಂದಿ ಗರ್ಭಿಣಿ ಮಹಿಳೆಯನ್ನು ಥಳಿಸಿದ್ದಾರೆ ಎಂದು ಪಾಕ್ ಮೂಲದ ಜಿಯೋ ನ್ಯೂಸ್ ವರದಿ ಮಾಡಿದೆ.

Culprits
ಪ್ರಮುಖ ಸುದ್ದಿ

ಹಾಲಿನ ವ್ಯಾಪಾರದ ಸೋಗಿನಲ್ಲಿ ಖೋಟಾ ನೋಟು ದಂಧೆ ; ಬಿಜೆಪಿ ಮುಖಂಡ ಸೇರಿ ಮೂವರ ಬಂಧನ

ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದು, ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

rss
ರಾಜಕೀಯ

RSS ಭಾರತದಲ್ಲಿನ ತಾಲಿಬಾನ್ ಇದ್ದಂತೆ : ಕಾಂಗ್ರೆಸ್‌

ಆರ್‌ಎಸ್‌ಎಸ್‌ ಎಂದಿಗೂ ಭಾರತೀಯತೆಯನ್ನು ಒಪ್ಪಿಲ್ಲ, ಮುಂದೆಯೂ ಒಪ್ಪುವುದಿಲ್ಲ. ಪ್ರತ್ಯೇಕ ಐಡೆಂಟಿಟಿಯಲ್ಲಿ ಇರಲು ಭಯಸುವ ಆರ್‌ಎಸ್‌ಎಸ್‌, ಭಾರತದಲ್ಲಿನ ತಾಲಿಬಾನ್ ಇದ್ದಂತೆ.