ರಾಜ್ಯದಲ್ಲಿ ದಿನೇ ದಿನೆ ಹೆಚ್ಚುತ್ತಿರುವ ಕೊರೊನಾ ಆತಂಕ ಗುರುವಾರವೂ ಮುಂದುವರಿದಿದ್ದು, ಗುರುವಾರ ಒಂದೇ ದಿನ 6,128 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ.
ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳು 1,18,632 ತಲುಪಿದೆ. ಇಂದು 3,793 ಮಂದಿ ಸೇರಿದಂತೆ ಒಟ್ಟು 46,694 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಗುರುವಾರ 83 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದು, ಈವರೆಗೆ ಮೃತಪಟ್ಟವರ ಸಂಖ್ಯೆ 2230ಕ್ಕೆ ಏರಿಕೆಯಾಗಿದೆ. ಪ್ರಸ್ತುತ 69,700 ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿ ಮಾಡಿದೆ.ಇನ್ನೂ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಬ್ಬರ ಮತ್ತಷ್ಟು ಹೆಚ್ಚಾಗಿದೆ. ಗುರುವಾರ 2233 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 22 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 53,324ಕ್ಕೆ ಏರಿದ್ದು, ಇಂದು 1912 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 15,791 ಮಂದಿ ಗುಣಮುಖರಾಗಿದ್ದರೆ. 36,523 ಮಂದಿ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ರಾಜಧಾನಿ ಬೆಂಗಳೂರಿನಲ್ಲಿ ಈವರೆಗೆ ಒಟ್ಟು 1009 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.