ಬೆಂಗಳೂರು, ನ. 16: ಕೊರೊನಾದಿಂದಾಗಿ ರಾಜ್ಯ ರಸ್ತೆ ಸಾರಿಗೆ ನೌಕರರ ವೇತನವನ್ನು ಸ್ಥಗಿತ ಮಾಡಿತ್ತು. ಈ ಹಿನ್ನಲೆಯಲ್ಲಿ ದೀಪಾವಳಿ ಹಬ್ಬದಂದೇ ರಾಜ್ಯ ಸರ್ಕಾರವು ರಸ್ತೆ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ಬಾಕಿ ವೇತನವನ್ನು ಬಿಡುಗಡೆಗೆ ಸಿಎಂ ಸೂಚನೆ ನೀಡಿದ ಹಿನ್ನಲೆಯಲ್ಲಿ, 2 ತಿಂಗಳ ಬಾಕಿ ವೇತನವನ್ನು ಬಿಡುಗಡೆ ಮಾಡಿದೆ.
ಡಿಸಿಎಂ ಸಚಿವ ಲಕ್ಷ್ಮಣ್ ಸವದಿ ನೇತೃತ್ವದಲ್ಲಿ ನೌಕರರು ಸಿಎಂ ಅವರನ್ನು ಭೇಟಿಯಾಗಿ, ಚರ್ಚೆ ನಡೆಸಿದರು. ಈ ಸಭೆಯ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಸಾರಿಗೆ ಇಲಾಖೆಗೆ ಮುಖ್ಯಮಂತ್ರಿಗಳು ಬಾಕಿ ಹಣ ಬಿಡುಗಡೆ ಮಾಡುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಸಾರಿಗೆ ಇಲಾಖೆಗೆ 634 ಕೋಟಿ ರಿಲೀಸ್ ಮಾಡಲಾಗಿದೆ. ಇದರಿಂದ ನೌಕರರ 2 ತಿಂಗಳ ಬಾಕಿ ವೇತನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದರು.