ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಯೋಜನೆಯ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಲಡಾಖ್‍ನ ಗಡಿ ರೇಖೆಯಲ್ಲಿ ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಯಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆಯುತ್ತಿದ್ದಕಾಮಗಾರಿಯನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ.
ಭಾರತ ಮತ್ತು ಚೀನಾ ನಡುವೆ ನಡೆಯುತ್ತಿರುವ ಯುದ್ಧದಲ್ಲಿ 20 ಬಾರತೀಯ ಯೋಧರು ಹುತಾತ್ಮರಾದ ಹಿನ್ನೆಯಲ್ಲಿ ಉದ್ದೇಶಿತ ರಾಮಮಂದಿರ ನಿರ್ಮಾಣ ಯೋಜನೆಯನ್ನು ನಿಲ್ಲಿಸಲಾಗಿದೆ. ಮಂದಿರ ನಿರ್ಮಾಣದ ಯೋಜನೆಯ ಕಾಮಗಾರಿ ಆರಂಭದ ಬಗ್ಗೆ ದೇಶದ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧರಿಸಲಾಗುವುದು ಎಂದು ಟ್ರಸ್ಟ್ ಸದಸ್ಯ ಅನಿಲ್ ಮಿಶ್ರಾ ತಿಳಿಸಿದ್ದಾರೆ.
ಜತೆಗೆ ಹುತಾತ್ಮ ಯೋಧರಿಗೆ ಟ್ರಸ್ಟ್ ಶ್ರದ್ಧಾಂಜಲಿ ಸಲ್ಲಿಸಿದ್ದು ಚೀನಾ ಸೇನಾಪಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಹಿಂದೂ ಮಹಾಸಭಾ ಸೇರಿದಂತೆ ಅನೇಕ ಹಿಂದೂ ಸಂಘಟನೆಗಳು ಚೀನಾ ವಿರುದ್ಧ ಪ್ರತಿಭಟನೆ ನಡೆಸಿ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್ ಪ್ರತಿಕೃತಿ ದಹನ ಮಾಡಿವೆ.