Visit Channel

ರಾಷ್ಟ್ರೀಯ ವೈದ್ಯರ ದಿನ: ವೈದ್ಯರಿಗೆ ಗಣ್ಯರಿಂದ ಧನ್ಯವಾದ

shutterstock_788683660

ಜುಲೈ.1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದ್ದು. ಎಲ್ಲ ವೈದ್ಯರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿ ಇನ್ನು ಹಲವಾರು ರಾಜಕೀಯ ಗಣ್ಯರು ಧನ್ಯವಾದ ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೋವಿಡ್-19 ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವ ನಮ್ಮ ಎಲ್ಲ ವೈದ್ಯರಿಗೆ ಮತ್ತು ಅವರ ಅಸಾಧಾರಣ ಕೆಲಸಕ್ಕೆ ಭಾರತ ಅಭಿನಂದಿಸುತ್ತದೆ ಎಂದು ಸಾಮಾಜಿಕ ಜಾಲತಾಣವಾದ ಟ್ವಿಟರ್‍ನಲ್ಲಿ ಟ್ವಿಟ್ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ ಮಾಡಿ ಕರೋನಾ ಸೋಂಕಿನ ಆರೋಗ್ಯ ತುರ್ತುಪರಿಸ್ಥಿತಿಯಲ್ಲಿ ಭರವಸೆಯನ್ನು ಮೂಡಿಸಿರುವ ಸಮರ್ಪಿತ ವೃತ್ತಿಪರರಿಗೆ ನಾನು ಅಪಾರ ಕೃತಜ್ಞನಾಗಿದ್ದೇನೆ ಎಂದು ಹೇಳಿದ್ದಾರೆ.
ಸಚಿವ ಅಮಿತ್ ಶಾ ಟ್ವಿಟ್ ಮಾಡಿ ಕರೋನಾ ಸೋಂಕನ್ನು ನಿಯಂತ್ರಿಸಲು ಕೆಚ್ಚೆದೆಯಿಂದ ಮುಂಚೂಣಿಯಲ್ಲಿರುವ ಎಲ್ಲ ವೈದ್ಯರಿಗೆ ವಂದಿಸುತ್ತೇನೆ . ಈ ಸಂಕಷ್ಟದ ಕಾಲದಲ್ಲಿ ರಾಷ್ಟ್ರವನ್ನು ಸುರಕ್ಷಿತವಾಗಿ ಮತ್ತು ಎಲ್ಲರ ಆರೋಗ್ಯ ಕಾಪಾಡಲು ವೈದ್ಯರು ಮಾಡುತ್ತಿರುವ ಕೆಲಸ ಅಸಾಧಾರಣವಾಗಿದೆ. ರಾಷ್ಟ್ರವು ಅವರ ಭಕ್ತಿ ಮತ್ತು ತ್ಯಾಗಕ್ಕೆ ನಮಸ್ಕರಿಸುತ್ತೇವೆ ಎಂದಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಕರೋನಾ ವಿರುದ್ಧ ಧಣಿವರಿಯದೆ ಹೋರಾಡುತ್ತಿರುವ ಎಲ್ಲಾ ವೈದ್ಯರಿಗೆ ನಮನ ಎಂದು ಹೇಳಿದ್ದಾರೆ. ಇನ್ನು ಅನೇಕ ಗಣ್ಯರು ದೇಶದ ಎಲ್ಲ ವೈದ್ಯರಿಗೆ ವೈದ್ಯರ ದಿನಾಚರಣೆಯ ಶುಭಾಶಯವನ್ನು ತಿಳಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.