Visit Channel

ರೋಟಾ ವೈರಸ್ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ವೈ

768cfeff-3c78-4a01-bcd5-f869386723ee

ಮಾರಣಾಂತಿಕ ಅತಿಸಾರ ಭೇದಿ ಖಾಯಿಲೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆ ಹೊರತಂದಿರುವ ರೋಟಾ ವೈರಸ್ ಲಸಿಕೆಯನ್ನು ಬೆಂಗಳೂರಿನಲ್ಲಿಂದು ಸಾಂಕೇತಿಕವಾಗಿ ಶಿಶುಗಳಿಗೆ ಲಸಿಕಾ ಹನಿ ನೀಡುವ ಮೂಲಕ ಮಾನ್ಯ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಪರಿಚಯಿಸಿದರು

ಮಾಹಿತಿಗಳ ಪ್ರಕಾರ ಭಾರತದಲ್ಲಿ ಪ್ರತಿ ವರ್ಷ 5 ವರ್ಷದೊಳಗಿನ 32.7 ಲಕ್ಷ ಮಕ್ಕಳು ಅತಿಸಾರ ಭೇದಿಯಿಂದ ಬಳಲುತ್ತಾರೆ. ಇದರಲ್ಲಿ 78ಸಾವಿರ ಮಕ್ಕಳು ಸಾವಿಗಿಡಾಗುತ್ತಾರೆ. ಈ ಮಾರಣಾಂತಿಕ ಖಾಯಿಲೆಗೆ ಉತ್ತರವಾಗಿ ಆರೋಗ್ಯ ಇಲಾಖೆ ರೋಟಾ ವೈರಸ್ ಲಸಿಕೆಯನ್ನು ಪರಿಚಯಿಸುತ್ತಿದೆ. ಈ ಲಸಿಕೆಯನ್ನು 6, 10 ಹಾಗೂ 14 ವಾರಗಳ ಶಿಶುಗಳಿಗೆ ನೀಡಲಾಗುವುದು.
ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಮುಖ್ಯಮಂತ್ರಿಗಳಾದ ಬಿ. ಎಸ್. ಯಡಿಯೂರಪ್ಪನವರು ಆರೋಗ್ಯ ಇಲಾಖೆಯ ಈ ಅಭಿಯಾನವನ್ನು ಶ್ಲಾಘಿಸಿ ಸರಿಯಾದ ಸಮಯದಲ್ಲಿ ಮಕ್ಕಳಿಗೆ ಈ ಲಸಿಕೆ ನೀಡಿ ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಲಹೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಜಾವೇದ್ ಅಕ್ತರ್, ಆಯುಕ್ತರಾದ ಪಂಕಜ್ ಕುಮಾರ್ ಪಾಂಡೆ, ಅಭಿಯಾನ ನಿರ್ದೇಶಕರಾದ ಡಿ. ಎಸ್. ರಮೇಶ್ ಮತ್ತಿತರ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು

Latest News

BJP
ರಾಜಕೀಯ

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? : ಬಿಜೆಪಿ

ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ(Congress Party) ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ ಎಂದಿದೆ.

Fruit
ಮಾಹಿತಿ

ಬಿಪಿ, ಮದುಮೇಹ ಸೇರಿದಂತೆ ಅನೇಕ ಖಾಯಿಲೆಗಳಿಗೆ ರಾಮಬಾಣ ನೇರಳೆ ಹಣ್ಣು ; ಓದಿ ಈ ಉಪಯುಕ್ತ ಮಾಹಿತಿ

ಮಧುಮೇಹ, ಹೃದಯದ ಕಾಯಿಲೆ, ಸಂಧಿವಾತ, ಹೊಟ್ಟೆಯ ಖಾಯಿಲೆಗಳ ನಿಯಂತ್ರಣ ಮತ್ತು ನಿವಾರಣೆಗೂ ಇದು ರಾಮಬಾಣ ಎನ್ನುತ್ತದೆ ಆಯುರ್ವೇದ(Ayurveda).

Lal Singh Chadda
ಮನರಂಜನೆ

ಲಾಲ್ ಸಿಂಗ್ ಚಡ್ಡಾ ನಷ್ಟಕ್ಕೆ ವಿತರಕರಿಗೆ ಪರಿಹಾರ ಕೊಡಲು ಸಜ್ಜಾದ್ರಾ ನಟ ಅಮೀರ್ ಖಾನ್?

ಚಿತ್ರದ ವಿತರಕರಿಗೆ ಪರಿಹಾರದ ಮಾದರಿಯನ್ನು ರೂಪಿಸಲು ನಟ ಅಮೀರ್ ಖಾನ್ ಮಾತುಕತೆ ನಡೆಸುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.