ತಿರುವನಂತಪುರ: ಲಿಂಗ ಬದಲಾವಣೆ ಮಾಡಿಸಿಕೊಳ್ಳಲು ಬಯಸುವ ತನ್ನ ರಾಜ್ಯದ ತೃತೀಯ ಲಿಂಗಿಗಳಿಗೆ ತಲಾ 2 ಲಕ್ಷ ರೂ. ಅನುದಾನ ನೀಡುವುದಾಗಿ ಕೇರಳ ಸರ್ಕಾರ ಘೋಷಿಸಿದೆ. ಆರೋಗ್ಯ ಸಚಿವೆ ಕೆಕೆ ಶೈಲಜಾ ಅವರು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾಗುವ ಲೈಂಗಿಕ ಅಲ್ಪಸಂಖ್ಯಾತರಿಗಾಗಿ ಈ ಸ್ಕೀಂ ಜಾರಿಗೆ ತಂದಿರುವುದಾಗಿ ತಿಳಿಸಿದ್ದಾರೆ.
ಅಲ್ಲದೇ ಉದ್ದೇಶಿತ ಯೋಜನೆಗೆ ಪ್ರತ್ಯೇಕವಾಗಿ ಹಣ ಮೀಸಲಿಡುವುದಾಗಿ ಘೋಷಿಸಿದ್ದಾರೆ.ಪುರುಷನಾಗಿ ಬದಲಾಗುವ ಲೈಂಗಿಕ ಅಲ್ಪಸಂಖ್ಯಾತರ ಶಸ್ತ್ರಚಿಕಿತ್ಸೆ ಖರ್ಚು 5 ಲಕ್ಷ ರೂಪಾಯಿ ತಗುಲಲಿದ್ದು, ಸರ್ಕಾರವು ಇದಕ್ಕೆ 2 ಲಕ್ಷ ರೂಪಾಯಿ ಅನುದಾನ ನೀಡಲಿದೆ.
ಇನ್ನು ಮಹಿಳೆಯಾಗಿ ಬದಲಾಗುವ ತೃತೀಯ ಲಿಂಗಿಗೆ 2.50 ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ಶೈಲಜಾ ಅವರು ತಿಳಿಸಿದ್ದಾರೆ. ಲೈಂಗಿಕ ಅಲ್ಪಸಂಖ್ಯಾತರಿಗೆ ವಿಶೇಷ ಯೋಜನೆಯನ್ನು ಘೋಷಿಸಿರುವ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ. ಈಚೆಗೆ ಅವರಿಗೆಂದೇ ಕೆಲವು ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ.