vijaya times advertisements
Visit Channel

ವಾಣಿಜ್ಯ ಮಂಡಳಿ ಅಧ್ಯಕ್ಷರನ್ನೇ ಧಿಕ್ಕರಿಸಿದ್ರಾ ನಟಿ ರಶ್ಮಿಕಾ ಮಂದಣ್ಣ.?

maxresdefault


ಕಿರಿಕ್ ಪಾರ್ಟಿ ಚಿತ್ರದ ಮೂಲಕ ಸ್ಯಾಂಡಲ್ ವುಡ್‍ಗೆ ಎಂಟ್ರಿ ಕೊಟ್ಟರೂ, ಟಾಲಿವುಡ್‍ನಲ್ಲೇ ಸಾಕಷ್ಟು ಹೆಸರು ಮಾಡಿದವರು ಕೊಡಗಿನ ಹುಡುಗಿ ರಶ್ಮಿಕಾ ಮಂದಣ್ಣ. ಚಲೋ, ಗೀತ ಗೋವಿದಂ ಹೀಗೆ ಹಿಟ್ ಚಿತ್ರಗಳಲ್ಲಿ ಅಭಿನಯಿಸಿರುವ ರಶ್ಮಿಕಾ ಸದ್ಯ ಕಾಲಿವುಡ್‍ನಲ್ಲೂ ಆಫರ್ ಗಿಟ್ಟಿಸಿಕೊಂಡಿದ್ದಾರೆ. ಈಗ ವಿಷ್ಯ ಏನು ಗೊತ್ತಾ..? ಡಿಯರ್ ಕಾಮ್ರೆಡ್ ಎಂಬ ಬಹುಭಾಷಾ ಚಿತ್ರದಲ್ಲಿ ಅಭಿನಯಿಸಿ ಎಲ್ಲರ ಮೆಚ್ಚುಗೆ ಗಳಿಸಿದ್ದ ರಶ್ಮಿಕಾ ನಂತರ ತಮಿಳಿನ ಪ್ರಮುಖ ವೆಬ್ ಸೈಟ್ ಒಂದಕ್ಕೆ ಸಂದರ್ಶನ ನೀಡಿದ್ದಾರೆ. ಆ ಸಂದರ್ಶನದಲ್ಲಿ ತನಗೆ ಕನ್ನಡ ಬಹುವುದಿಲ್ಲ, ಹಾಗೂ ಡಬ್ಬಿಂಗ್ ಮಾಡುವುದು ಸಹ ಬಲು ಕಷ್ಟ ಎಂದಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಕನ್ನಡಾಭಿಮಾನಿಗಳ ಕೋಪಕ್ಕೆ ಗುರಿಯಾಗಿದ್ದಾರೆ.
ಈ ಬಗ್ಗೆ ಕನ್ನಡಪರ ಹೋರಾಟಗಾರರು ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಈ ದೂರಿನಂತೆ ರಶ್ಮಿಕಾರನ್ನು ಅಧ್ಯಕ್ಷರು ಪ್ರಶ್ನಿಸಿದ್ದಕ್ಕೆ ಗರಂ ಆದ ನಟಿ, ನಾನೇನೂ ತಪ್ಪು ಹೇಳಿಲ್ಲ. ನನಗೆ ಕನ್ನಡವೇ ಬರುವುದಿಲ್ಲ ಎಂದು ನಾನೆಲ್ಲೂ ಹೇಳಿಲ್ಲ. ಬದಲಾಗಿ ಭಾಷೆಯ ಉಚ್ಛಾರಣೆಯ ವೇಳೆ ಬಾಯಿ ತೊದಲುತ್ತದೆ ಎಂಬರ್ಥದಲ್ಲಿ ಹೇಳಿದ್ದೆ. ಈ ಸಂಬಂಧ ವಿಚಾರಣೆಗೆ ನಾನು ಫಿಲಂ ಛೇಂಬರ್‍ಗೆ ಬರಲಾರೆ. ಈ ವಿಚಾರವಾಗಿ ಏನೇ ಆದರೂ ಹೈಕೋರ್ಟ್‍ನಲ್ಲಿ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದಾರಂತೆ..ಒಟ್ನಲ್ಲಿ ಕರುನಾಡಿನಲ್ಲಿ ಕನ್ನಡಿಗರ ಆಕ್ರೋಶಕ್ಕೆ ರಶ್ಮಿಕಾ ಗುರಿಯಾಗಿರುವುದಂತೂ ನಿಜ.

Latest News

ರಾಜ್ಯ

ಬೆಳಗಾವಿ ಗಡಿ ವಿವಾದ : ಭದ್ರತೆಯ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿದ ಮಹಾರಾಷ್ಟ್ರ!

ಬೆಳಗಾವಿ ಗಡಿ ವಿವಾದದ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಿರುಕು ಶೀಘ್ರದಲ್ಲೇ ಶಮನಗೊಳ್ಳುವ ಲಕ್ಷಣ ಕಂಡುಬರುತ್ತಿಲ್ಲ ಎಂಬುದನ್ನು ಉಲ್ಲೇಖಿಸಿದೆ.

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ