ವಾಯು ಮಾಲಿನ್ಯಗೊಳಿಸುವವರೇ ಹುಷಾರ್…

ದೆಹಲಿ, ಅ. 29: ಚಳಿಗಾಲದ ಆರಂಭದಲ್ಲಿಯೇ ವಾಯುಮಾಲಿನ್ಯ ದಿನೇ ದಿನೇ ಹೆಚ್ಚಾಗುತ್ತಿದೆ. ಇದು ಕೊರೊನಾ ಹರಡುವಿಕೆಗೂ ಕಾರಣವಾಗಬಹುದು. ಅದರ ಜತೆಗೆ ಅನೇಕ ಜನರಲ್ಲಿ ಉಸಿರಾಟದ ತೊಂದರೆ ಕೂಡ ಕಾಣಿಸಿಕೊಳ್ಳಬಹುದು. ಈ ಕಾರಣದಿಂದಾಗಿ ಕೇಂದ್ರ ಸರ್ಕಾರವು ಒಂದು ಹೊಸ ನೀತಿಯನ್ನು ಜಾರಿ ತಂದಿದೆ.

ದೆಹಲಿ ಸೇರಿದಂತೆ ಅಕ್ಕ-ಪಕ್ಕದ ರಾಜ್ಯಗಳಲ್ಲಿ ವಾತಾವರಣ ಮಲಿನಗೊಳಿಸುವವರು ಎಚ್ಚರದಿಂದಿರಿ. ಸ್ವಲ್ಪ ಯಾಮಾರಿ  ವಾಯು ಮಾಲಿನ್ಯ ಮಾಡಿದರೂ ಕೋಟಿ ಕೋಟಿ ದಂಡ ಕಟ್ಟಬೇಕಾದೀತು. ವಾಯ ಮಾಲಿನ್ಯ ಮಾಡುವವರ ವಿರುದ್ಧ 5 ಕೋಟಿ ರೂಪಾಯಿವರೆಗೆ ದಂಡ ವಿಧಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಲ್ಲದೇ 5 ವರ್ಷದವರೆಗೆ ಜೈಲು ಶಿಕ್ಷೆಯಾಗುವ ಸಾಧ್ಯತೆಯಿದೆ.

ಹೆಚ್ಚುತ್ತಿರುವ ವಾಯುಮಾಲಿನ್ಯದ ದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ಕೇಂದ್ರ ಆಯೋಗವನ್ನು ರಚಿಸಿದೆ. ಇದ್ರಲ್ಲಿ ಇಸ್ರೋ ಪ್ರತಿನಿಧಿಗಳು ಸೇರಿರುತ್ತಾರೆ.

ದೆಹಲಿ-ಎನ್‌ಸಿಆರ್, ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಯುಪಿ ವಾಯುಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಆಯೋಗವನ್ನು ರಚಿಸಿದೆ. ಈ ಆಯೋಗವು ವಾಯುಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಸೂಚನೆ ನೀಡಲಿದೆ. ಕೆಲಸದ ಮೇಲ್ವಿಚಾರಣೆ ಮಾಡಲಿದೆ. ಮಾಲಿನ್ಯ ನಿಯಂತ್ರಣಕ್ಕೆ ಅನೇಕ ಅಭಿಯಾನಗಳನ್ನು ನಡೆಸಲಾಗ್ತಿದೆ. ಆದ್ರ ಅದ್ರಲ್ಲೂ ಕೆಲ ದೋಷಗಳು ಕಂಡು ಬಂದಿರುವ ಕಾರಣ ದೆಹಲಿ ಸರ್ಕಾರ ಗ್ರೀನ್ ದೆಹಲಿ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ದೀಪಾವಳಿ ಹತ್ತಿರವಾಗ್ತಿರುವ ಕಾರಣ ದೆಹಲಿ ಸರ್ಕಾರ ಈ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

Latest News

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.

ಆರೋಗ್ಯ

ದೇಹ ನೀಡುವ `ಈ’ ಸೂಚನೆಗಳು ಕಿಡ್ನಿ ವೈಪಲ್ಯವನ್ನು ಸೂಚಿಸುತ್ತವೆ ; ಇಲ್ಲಿದೆ ಮಾಹಿತಿ ಓದಿ

ಕಿಡ್ನಿ(Kidney) ನಮ್ಮ ದೇಹದ ಪ್ರಮುಖ ಅಂಗವಾಗಿದೆ. ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಮುಖ್ಯ ಪಾತ್ರವಹಿಸುತ್ತವೆ.