Visit Channel

ವಿದ್ಯಾಗಮ‌ ಕಾರ್ಯಕ್ರಮ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಸೂಚನೆ: ಸುರೇಶ್‌ಕುಮಾರ್

surgov

ಬೆಂಗಳೂರು: ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಅವರು, ರಾಜ್ಯದಲ್ಲಿ ಜಾರಿಗೆ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ.ವಿದ್ಯಾಗಮ ಯೋಜನೆಯು ಸಮಾಜದ ಕೆಳಸ್ಥರದ, ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮವಾಗಿದೆ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

Latest News

E-Shram Card
ಪ್ರಮುಖ ಸುದ್ದಿ

ಇ-ಶ್ರಮ ಕಾರ್ಡ್ ಉಪಯೋಗದ ಬಗ್ಗೆ ನಿಮಗೆ ತಿಳಿದಿಲ್ಲವೆ ?  

ಅಸಂಘಟಿತ ವಲಯದ ಕಾರ್ಮಿಕರಿಗೆ  ಸಂಪೂರ್ಣವಾಗಿ  ವೃತ್ತಿ ಮಾಹಿತಿ  ಮತ್ತು   ಸರ್ಕಾರದ  ಯೋಜನೆಗಳು  ಕಾರ್ಮಿಕರಿಗೆ ನೇರವಾಗಿ ತಲುಪಿಸುವ ,ಹಾಗೂ ದತ್ತಾಂಶ ಸಂಗ್ರಹಿಸುವ ಉದ್ದೇಶದಿಂದ 26  ಆಗಸ್ಟ್‌  2021 ರಂದು  ಕೇಂದ್ರ ಸರ್ಕಾರವು ಈ ಯೋಜನೆಯನ್ನು  ಜಾರಿಗೊಳಿಸಿದೆ. 

inflation
ದೇಶ-ವಿದೇಶ

ಅಗತ್ಯ ವಸ್ತುಗಳ ಬೆಲೆ ತಗ್ಗಿದ ಪರಿಣಾಮ: ಜುಲೈನಲ್ಲಿ ಚಿಲ್ಲರೆ ಹಣದುಬ್ಬರ ಶೇ.6.7 ಇಳಿಕೆ ನಿರೀಕ್ಷೆ

ಅಂದು 100 ರೂಪಾಯಿಗೆ ಖರೀದಿಸುವ ಸಾಮಾನು ಈಗ 500 ಕೊಟ್ಟರು ಬರುವುದಿಲ್ಲ. ಕಾರಣ ಹಣದ ಮೌಲ್ಯ ಕಡಿಮೆಯಾಗಿದೆ, ಈ ಹಣದ ಮೌಲ್ಯ ಕಡಿಮೆಯಾಗಿರುವುದನ್ನೇ ನಾವು ಹಣದುಬ್ಬರ ಎನ್ನುತ್ತೇವೆ.