vijaya times advertisements
Visit Channel

ವಿಶ್ವದಾಖಲೆ ಬರೆದ ರಾಕಿಬಾಯ್ .

download

ರಾಕಿಂಗ್ ಸ್ಟಾರ್ ಯಶ್‍ಗೆ ಇಂದು 34 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.. ಕೆ.ಜಿ.ಎಫ್ -2 ಶೂಟಿಂಗ್‍ನಲ್ಲಿ ಬ್ಯುಸಿಯಿರುವ ರಾಕಿಬಾಯ್ ತಮ್ಮ  ಹುಟ್ಟು ಹಬ್ಬದ ಪ್ರಯುಕ್ತ ಮಂಗಳವಾರ ಮಧ್ಯರಾತ್ರಿ ನೈಸ್‍ರೋಡ್‍ನ ನಂದಿಲಿಂಕ್ಸ್‍ಗೆ ಆಗಮಿಸಿ  ಅಭಿಮಾನಿಗಳಿಂದ   ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ.

ರಾಜ್ಯಮಾತ್ರವಲ್ಲದೆ ಹೊರರಾಜ್ಯದಿಂದಲೂ ಯಶ್ ಅಭಿಮಾನಿಗಳು ನಂದಿಲಿಂಕ್ಸ್ ಗ್ರೌಂಡ್‍ಗೆ  ಜಮಾಯಿಸಿದ್ದು  ಯಶ್‍ಗೆ ಹುಟ್ಟುಹಬ್ಬದ ಶುಭಾಶಯಕೋರಿದ್ದಾರೆ . ಇನ್ನು 5000 ಕೆ.ಜಿ ಕೇಕ್ ಕಟ್ ಮಾಡೋ ಮೂಲಕ ಯಶ್ ಇತಿಹಾಸ ಬರೆದಿದ್ದು.. ಯಾರಿಗೂ ಸಿಕ್ಕದ ಲಕ್ ಯಶ್‍ಗೆ ಸಿಕ್ಕಾಂತಾಗಿದೆ. ಮಾತ್ರವಲ್ಲ ಯಶ್ ಬರ್ತ್‍ಡೇ ಪ್ರಯುಕ್ತ ಇದೇ ಮೊದಲ ಬಾರಿ  216 ಅಡಿ ಎತ್ತರದ ಕಟೌಟ್ ಹಾಕಲಾಗಿದ್ದು ಇದು ವಿಶ್ವ ದಾಖಲೆಯನ್ನು ನಿರ್ಮಿಸಿದೆ.. ಅಂದಹಾಗೆ  ರಾಕಿಂಗ್ ಸ್ಟಾರ್ ಹುಟ್ಟುಹಬ್ಬದ ನಿಟ್ಟಿನಲ್ಲಿ ಕೆ.ಜಿ.ಎಫ್ -2 ಲುಕ್ ಬಿಡುಗಡೆಗೊಂಡಿದ್ದು  ಯಶ್ ಡೈಲಾಗ್ ಹೊಡಿಯೋದರ ಮೂಲಕ ಮತ್ತೆ ಸೌಂಡ್ ಮಾಡಿದ್ದಾರೆ.

https://www.facebook.com/TheYashFC/videos/815745562224656/
https://www.facebook.com/TheYashFC/videos/2497509723829892/

Latest News

ರಾಜ್ಯ

ಬೆಳಗಾವಿ ಗಡಿ ವಿವಾದ : ಭದ್ರತೆಯ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಿದ ಮಹಾರಾಷ್ಟ್ರ!

ಬೆಳಗಾವಿ ಗಡಿ ವಿವಾದದ ಕುರಿತು ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಬಿರುಕು ಶೀಘ್ರದಲ್ಲೇ ಶಮನಗೊಳ್ಳುವ ಲಕ್ಷಣ ಕಂಡುಬರುತ್ತಿಲ್ಲ ಎಂಬುದನ್ನು ಉಲ್ಲೇಖಿಸಿದೆ.

ಮನರಂಜನೆ

ನೆಟ್ ಫ್ಲಿಕ್ಸ್ ನಲ್ಲಿ ಕಾಂತಾರ ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಲಭ್ಯವಾಗಲಿದೆ : ರಿಷಬ್ ಶೆಟ್ಟಿ

ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.

ಪ್ರಮುಖ ಸುದ್ದಿ

ದೆಹಲಿ ಮಹಾನಗರ ಪಾಲಿಕೆ ಚುನಾವಣೆ: ಜಯದ ಹಾದಿಯಲ್ಲಿ ಆಪ್

ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲೋ ಪ್ರಕಾರ ಬಿಜೆಪಿ 69 ರಿಂದ 91 ವಾರ್ಡ್ ಗಳಲ್ಲಿ ಗೆಲುವು ಸಾಧ್ಯತೆ ಹಾಗೂ ಕಾಂಗ್ರೆಸ್ 3 ರಿಂದ 7 ವಾರ್ಡ್ ಗಳಲ್ಲಿ ಗೆಲ್ಲುತ್ತದೆ ಎಂದು ಸಮೀಕ್ಷೆ ತಿಳಿಸಿದೆ

ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಕಲ್ಲು ತೂರಾಟ ; ಪುಣೆಯಲ್ಲಿ ಕರ್ನಾಟಕ ಬಸ್‌ಗಳಿಗೆ ಮಸಿ ಬಳಿದ ಶಿವಸೇನಾ!

ಕರ್ನಾಟಕ-ಮಹಾರಾಷ್ಟ್ರ ಮುಖ್ಯಮಂತ್ರಿಗಳ ನಡುವಿನ ವಾಗ್ಸಮರ ಗಡಿ ಭಾಗದಲ್ಲಿ ಘರ್ಷಣಗೆ ಪ್ರಮುಖವಾಗಿದೆ. ಎಂ.ಇ.ಎಸ್ (M.E.S) ಪುಂಡರ ಹಾವಳಿ ಹೆಚ್ಚಾಗಿದ್ದು, ಕರ್ನಾಟಕ ರಾಜ್ಯದ ಬಸ್‌ಗಳನ್ನು ಅಡಗಟ್ಟಿ ಮಸಿ ಹಚ್ಚಿ ಆಕ್ರೋಶ ಹೊರಹಾಕಿದ್ದರು